ಬೆಲೆಬಾಳುವ ಸೊತ್ತು ಕಳ್ಳತನ: ದಂಪತಿಗಳ ಬಂಧನ

ಬೆಲೆಬಾಳುವ ಸೊತ್ತು ಕಳ್ಳತನ: ದಂಪತಿಗಳ ಬಂಧನ


ಪುತ್ತೂರು: ಪುತ್ತೂರಿನ ಕಸಬಾದಲ್ಲಿ ಅಪರಿಚಿತ ಇಬ್ಬರು ವ್ಯಕ್ತಿಗಳು ಹೆಲ್ಮೆಟ್ ಧರಿಸಿ ಮಧ್ಯರಾತ್ರಿ ಮನೆಗೆ ಬಂಧು ಬೆಲೆಬಾಳುವ ಸೊತ್ತುಗಳನ್ನು ಕಳ್ಳತನ ಮಾಡಿದ್ದು, ಇಬ್ಬರು ಆರೋಪಿಗಳನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪುತ್ತೂರಿನ ಮುಡೂರು ನಿವಾಸಿ ಕಾರ್ತಿಕ್ ರಾವ್ (31) ಮತ್ತು ಆತನ ಪತ್ನಿ ಕೆ.ಎಸ್. ಸ್ವಾತಿ ರಾವ್ (25) ಎಂದು ಗುರುತಿಸಲಾಗಿದೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮೋಟಾರು ಸೈಕಲ್‌ನ್ನು ವಶಕ್ಕೆ ಪಡೆದಿದ್ದು, ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕರಾಗಿ ಕೆಲಸ ಮಾಡಿಕೊಂಡಿರುವುದಾಗಿದೆ ವಿಚಾರಣೆಯಲ್ಲಿ ತಿಳಿದುಬಂದಿದೆ.

ಪ್ರಕರಣದ ವಿವರ:

ನಿವೃತ್ತ ಪ್ರಾಂಶುಪಾಲ ಪುತ್ತೂರು ಕಸಬಾ ನಿವಾಸಿ ಎ.ವಿ. ನಾರಾಯಣ (44) ಅವರು ಡಿ.17 ರಂದು ಮಧ್ಯರಾತ್ರಿ ಇಬ್ಬರು ಅಪರಿಚಿತ ವ್ಯಕ್ತಿಗಳು ಹೆಲ್ಮೆಟ್ ಧರಿಸಿಕೊಂಡು, ಮುಖಚಹರೆಯನ್ನು ಮರೆಮಾಚಿ, ನಾರಾಯಣ ಅವರ ಮನೆಯಿಂದ ಬೆಲೆ ಬಾಳುವ ಸೊತ್ತುಗಳನ್ನು ಕಳ್ಳತನ ಮಾಡಲು ಮನೆಯ ಹಿಂಬಾಗಿಲಿನಿಂದ ಮನೆಗೆ ಪ್ರವೇಶಿಸಿ ದೂರುದಾರರನ್ನು ಹಾಗೂ ಅವರ ಪತ್ನಿಯನ್ನು ಬೆದರಿಸಿದ್ದು, ಈ ವೇಳೆ ನಡೆದ ತಳ್ಳಾಟದಲ್ಲಿ ನಾರಾಯಣ ಅವರ ಪತ್ನಿಗೆ ಗಾಯವಾಗಿದ್ದು, ಈ ಸಂದರ್ಭದಲ್ಲಿ ಜೋರಾಗಿ ಕಿರುಚಿಕೊಂಡಿದ್ದು. ಇದರಿಂದ ಹೆದರಿದ ಆರೋಪಿಗಳು ಮನೆಯ ಹಿಂಬಾಗಿಲಿನ ಮೂಲಕ ಓಡಿ ಪರಾರಿಯಾಗಿದ್ದರು. ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 127/2025, ಕಲಂ: 307 ಜೊತೆಗೆ 3(5) ಬಿಎನ್‌ಎಸ್ 2023 ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article