ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನಾಚರಣೆ
Sunday, December 7, 2025
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸಸ್ಯಶಾಸ್ತ್ರ ವಿಭಾಗ, ಪ್ರಾಣಿಶಾಸ್ತ್ರ ವಿಭಾಗ ಹಾಗೂ ಪರಿಸರ ಸಂಘ ಸಂಯುಕ್ತವಾಗಿ ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನಾಚರಣೆಯ ಕಾರ್ಯಕ್ರಮ ಸ್ಪಂದನ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಅವರು ಮಾತನಾಡಿ, ರಾಷ್ಟ್ರವು ಎದುರಿಸುತ್ತಿರುವ ಹೊಸ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು ನಿರ್ಮಲ ಮತ್ತು ಹೊಣೆಗಾರಿಕೆಯ ಮನೋಭಾವವನ್ನು ಬೆಳೆಸಿಕೊಳ್ಳುವ ಅಗತ್ಯವನ್ನು ಅವರು ಹೇಳಿದರು.
ಮುಖ್ಯ ಅತಿಥಿ ಐಕ್ಯೂಎಸಿ ಸಂಯೋಜಕ ಡಾ. ಎಡ್ವಿನ್ ಡಿಸೋಜಾ ಅವರು ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನಾಚರಣೆಯನ್ನು ಆಚರಿಸುವ ಮಹತ್ವದ ಬಗ್ಗೆ ವಿವರವಾದ ಹಾಗೂ ಮಾಹಿತಿಪೂರ್ಣ ಉಪನ್ಯಾಸವನ್ನು ನೀಡಿ ಭೋಪಾಲ್ ಅನಿಲ ದುರಂತವನ್ನು ಸ್ಮರಿಸುವುದರ ಜೊತೆಗೆ ಕಠಿಣ ಮಾಲಿನ್ಯ ನಿಯಂತ್ರಣ ಕ್ರಮಗಳ ತುರ್ತು ಅಗತ್ಯವನ್ನು ಅವರು ತಿಳಿಸಿ ವಿದ್ಯಾರ್ಥಿಗಳು ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶಶಿಪ್ರಭಾ ಬಿ. ಹಾಗೂ ಸ್ಮಿತಾ ವಿವೇಕ್ ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

