ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕೆ
Sunday, December 21, 2025
ಶಿರ್ವ: ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಿರ್ವ ರೋಟರಿ ಸಹಭಾಗಿತ್ವದಲ್ಲಿ ಭಾನುವಾರ ಜರುಗಿದ ಪಲ್ಸ್ ಪೋಲಿಯೊ ಲಸಿಕೆ ನೀಡುವ ಕಾರ್ಯಕ್ರಮವನ್ನು ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ರಾವ್, ದಂತ ಆರೋಗ್ಯ ವೈದ್ಯಾಧಿಕಾರಿ ಡಾ. ಗಾಯತ್ರಿ ಸಂತೋಷ್, ರೋಟರಿ ಅಧ್ಯಕ್ಷ ವಿಲಿಯಮ್ ಮಚಾದೋ, ಪಲ್ಸ್‌ಪೋಲಿಯೋ ನಿರ್ದೇಶಕ ದಿನೇಶ್ ಕುಲಾಲ್, ಕಾರ್ಯದರ್ಶಿ ಹೊನ್ನಯ್ಯ ಶೆಟ್ಟಿಗಾರ್, ರೋಟರಿ ಪದಾಧಿಕಾರಿಗಳು, ಆರೋಗ್ಯ ಕಾರ್ಯಕರ್ತೆಯವರು, ರೋಟರಿ ಸದಸ್ಯರು ಉಪಸ್ಥಿತರಿದ್ದರು.