ಆರು ತಿಂಗಳಿನಿಂದ ಬಾರದ ವೇತನ: ವೈದ್ಯಾಧಿಕಾರಿ ರಾಜೀನಾಮೆ

ಆರು ತಿಂಗಳಿನಿಂದ ಬಾರದ ವೇತನ: ವೈದ್ಯಾಧಿಕಾರಿ ರಾಜೀನಾಮೆ

ಸುಳ್ಯ: ಆರು ತಿಂಗಳಿನಿಂದ ವೇತನ ಬಾರದ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಸುಳ್ಯದ  ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಡಾ.ಕುಲದೀಪ್ ಎಂ.ಡಿ. ರಾಜೀನಾಮೆ ನೀಡಿದ್ದಾರೆ.

ಕಳೆದ ಆರು ತಿಂಗಳಿಂದ ವೇತನ ಬಾರದಿರುವುದರಿಂದ ಬೇಸತ್ತು ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಕುಲದೀಪ್ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷದಿಂದ ವೈದ್ಯಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು. ಸಂಬಳ ಬಾರದೇ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article