ಬುದ್ದಿವಾದದ ಮಾತಿಗೆ ನೊಂದು ಯುವತಿ ನೇಣಿಗೆ ಶರಣು
Monday, December 29, 2025
ಉಡುಪಿ: ಮನೆಯಲ್ಲೇ ಓದುವಂತೆ ಹೇಳಿದ ತಾಯಿಯ ಬುದ್ದಿಮಾತಿಗೆ ನೊಂದು ಮಗಳು ನೇಣಿಗೆ ಶರಣಾದ ಘಟನೆ ಸೋಮವಾರ ಹಿರೇಬೆಟ್ಟು ಗ್ರಾಮದ ಬಾಲ್ಕುಟ್ಟು ಎಂಬಲ್ಲಿ ಸಂಭವಿಸಿದೆ.
ಉಡುಪಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಮನ್ವಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಫೋನ್ನಲ್ಲೇ ಕಾಲ ಕಳೆಯುತ್ತಿದ್ದ ಮಗಳಿಗೆ ಮನೆಯಲ್ಲಿ ತಾಯಿ ಓದುವಂತೆ ಬುದ್ದಿವಾದ ಹೇಳಿದ್ದರು. ಅದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ತಕ್ಷಣ ಮನೆಮಂದಿ ಆಕೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಆಕೆ ಮೃತಪಟ್ಟಿದ್ದಾಳೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.