ಉಜಿರೆಯ ಡಿಜಿಟಲ್ ಗ್ರಂಥಾಲಯಕ್ಕೆ 10,000 ರೂ. ಮೌಲ್ಯದ ಪುಸ್ತಕಗಳ ಹಸ್ತಾಂತರ
Wednesday, December 31, 2025
ಉಜಿರೆ: ಉಜಿರೆ ಗ್ರಾಮ ಪಂಚಾಯತಿಯ ಡಿಜಿಟಲ್ ಗ್ರಂಥಾಲಯ ಹಾಗೂ ಅರಿವು ಕೇಂದ್ರಕ್ಕೆ ಉಜಿರೆ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಉದಯಚಂದ್ರ ಅವರು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ 10 ಸಾವಿರ ರೂ. ಬೆಲೆಯ ಪುಸ್ತಕಗಳನ್ನು ಖರೀದಿಸಿ ಹಸ್ತಾಂತರಿಸಿದರು.
ಉಜಿರೆ ಗ್ರಂಥಾಲಯದ ಮೇಲ್ವಿಚಾರಕಿ ತಾರಾ ಅವರಿಗೆ ಕೃತಜ್ಞತೆ ಸಲ್ಲಿಸಿ, ಸಾರ್ವಜನಿಕರು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ವಿದ್ಯಾರ್ಥಿಗಳು ಅದರ ಪೂರ್ಣ ಪ್ರಯೋಜನ ಪಡೆಯುವಂತೆ ವಿನಂತಿಸಿಕೊಂಡಿದ್ದಾರೆ.