ಎಸ್.ಡಿ.ಎಂ ಪ.ಪೂರ್ವ ಕಾಲೇಜು: 'ಆರೋಹಣಂ-2025' ವಾರ್ಷಿಕೋತ್ಸವ ಸಮಾರಂಭ
ಆರೋಗ್ಯವಂತ ಸಮಾಜ ಮತ್ತು ಸಾಧನೆಯತ್ತ ಹೆಜ್ಜೆ ಹಾಕೋಣ: ಡಾ. ಹೇಮಗಿರಿ ಕೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, ಎಲ್ಲಾ ಸಾಧಕ ವಿದ್ಯಾರ್ಥಿಗಳಿಗೆ ಮತ್ತು ತರಬೇತುದಾರರಿಗೆ , ಪ್ರೋತ್ಸಾಹಿಸಿದ ಉಪನ್ಯಾಸಕರು ಮತ್ತು ಪೋಷಕರಿಗೆ ಅಭಿನಂದನೆಗಳನ್ನು ತಿಳಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಮೌಲ್ಯಯುತ ಶಿಕ್ಷಣ ಮತ್ತು ಜೀವನ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಕಲ್ಪಸಿಕೊಡುವುದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಹತ್ತರ ಉದ್ದೇಶವಾಗಿದೆ. ಇದನ್ನು ಹಿರಿಯ ವಿದ್ಯಾರ್ಥಿಗಳು ಸಾಬೀತು ಮಾಡಿದ್ದಾರೆ. ಇವೆಲ್ಲವು ನಿಮಗೆ ಪ್ರೇರಣೆಯಾಗಬೇಕು ಎಂದರು.
ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಡಾ. ಪ್ರಮೋದ್ ಕುಮಾರ್ ಬಿ. ಎಸ್.ಡಿ.ಎಂ ಪದವಿಪೂರ್ವ ವಿದ್ಯಾ ಸಂಸ್ಥೆಯ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡೆ ಇತ್ಯಾದಿ ಸಾಧನೆಗಳ ವಾರ್ಷಿಕ ವರದಿಯನ್ನು ವಾಚಿಸಿದರು. ಸಮಾರಂಭದಲ್ಲಿ ಸಂಸ್ಥೆಯ ಬೆಳವಣಿಗೆಯ ಕುರಿತಾಗಿ ಹಿರಿಯರು ಮತ್ತು ಗಣ್ಯರು ಕಳುಹಿಸಿದ ಸಂದೇಶ ಪತ್ರವನ್ನು ಉಪನ್ಯಾಸಕಿ ಪಲ್ಲವಿ ವಾಚಿಸಿದರು.
ಶೈಕ್ಷಣಿಕ ಸಾಲಿನಲ್ಲಿ ಪಠ್ಯ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಮತ್ತು ಕಾಲೇಜಿನ ವತಿಯಿಂದ ಉಪನ್ಯಾಸಕರಿಗೆ ಆಯೋಜಿಸಿದ್ದ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದವರಿಗೆಛ್ಘ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ನಡೆಯಿತು. ಪ್ರಶಸ್ತಿಯನ್ನು ಅತಿಥಿಗಳಾದ ಡಾ. ಸತೀಶ್ಚಂದ್ರ ಎಸ್., ಡಾ. ಹೇಮಗಿರಿ ಕೆ, ದೀಪಾ ವಿ ಕಟ್ಟೆ ಸೇರಿದಂತೆ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ಹಸ್ತಾಂತರಿಸಿದರು.
ಸಭೆಯಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಮತ್ತು ಕಾಲೇಜಿನ ವತಿಯಿಂದ ಕಾರ್ಯಕ್ರಮದ ಅಭ್ಯಾಗತರಾಗಿದ್ದ ಡಾ. ಹೇಮಗಿರಿ ಕೆ, ದೀಪಾ ವಿ ಕಟ್ಟೆ ಅವರನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಗೌರವಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕಾಲೇಜಿನ ವಿದ್ಯಾರ್ಥಿಗಳಿಂದ ಮನೋರಂಜನೀಯ ಸಾಂಸ್ಕೃತಿಕ ಕಾರ್ಯಕ್ರಮದ ನಡೆಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಉಪನ್ಯಾಸಕರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ. ಸ್ವಾಗತಿಸಿದರು. ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು. ಕಾರ್ಯಕ್ರಮವನ್ನು ಕುಮಾರಿ ಹಿಂಸಿನಿ ಭೀಡೆ ಹಾಗೂ ಕುಮಾರಿ ವಸುಧ ನಿರೂಪಿಸಿ, ಉಪನ್ಯಾಸಕ ಡಾ . ಮಹಾವೀರ ಜೈನ್ ವಂದಿಸಿದರು.
ಸಾಧಕ ವಿದ್ಯಾರ್ಥಿ ಹಾಗೂ ಉಪನ್ಯಾಸಕರಿಗೆ ಸನ್ಮಾನ:
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ , ರ್ಯಾಂಕ್ ಪಡೆದುಕೊಳ್ಳುವುದರ ಮೂಲಕ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡ ಎಸ್.ಡಿ.ಎಂ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಸಾಧಕ ವಿದ್ಯಾರ್ಥಿಗಳಾದ ತುಷಾರ (ವಿಜ್ಞಾನ ವಿಭಾಗ), ನೀತಿ (ವಿಜ್ಞಾನ ವಿಭಾಗ), ಆರ್ಯ ದಿನೇಶ್ (ವಾಣಿಜ್ಯ ವಿಭಾಗ), ಅನನ್ಯಾ (ವಾಣಿಜ್ಯ ವಿಭಾಗ ) ಶ್ರೇಯಾ( ಕಲಾ ವಿಭಾಗ) ರವರಿಗೆ ಎಸ್.ಡಿ.ಎಂ ಸಂಸ್ಥೆ ಮತ್ತು ಪದವಿ ಪೂರ್ವ ಕಾಲೇಜಿನ ವತಿಯಿಂದ ಸನ್ಮಾನಿಸಿ, ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಪ್ರಾಚಾರ್ಯರ ಸಂಘದ ಸದಸ್ಯತ್ವಕ್ಕೆ ಆಯ್ಕೆಯಾಗಿರುವ ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ., ಇತ್ತೀಚೆಗೆ ಡಾಕ್ಟರೇಟ್ ಪದವಿ ಪಡೆದ ಡಾ. ಮಹಾವೀರ್ ಜೈನ್ ಹಾಗು ಉಪನ್ಯಾಸಕರ ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕಾಲೇಜಿನ ಉಪನ್ಯಾಸಕಿಯರಿಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ವೇದಿಕೆಯಲ್ಲಿ ಸನ್ಮಾನಿಸಿದರು.
'ಎಸ್.ಡಿ.ಎಂ ಸಂಸ್ಥೆ ವಿದ್ಯಾರ್ಥಿಗಳ ಉತ್ತಮ ಆಯ್ಕೆಯಾಗಿದೆ. ಇಲ್ಲಿನ ಮೌಲ್ಯಯುತ ಶಿಕ್ಷಣ ಮತ್ತು ಸಂಸ್ಕಾರ ಎಲ್ಲವು ಭಿನ್ನ ಮತ್ತು ವಿಶೇಷ. ಸಂಸ್ಥೆಯೂ ಈಗಾಗಲೇ ನೂರಾರು ಸಾಧಕರನ್ನು ಸಮಾಜಕ್ಕೆ ನೀಡಿದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಇಲ್ಲಿ ಕಲ್ಪಿಸಿಕೊಡಲಾಗಿದೆ. ಇದರ
ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡು ಬಹುಮುಖ ಪ್ರತಿಭೆಗಳಾಗಿ ರೂಪುಗೊಳ್ಳಬೇಕು. - ದೀಪಾ ವಿ. ಕಟ್ಟೆ, ಚಲನ ಚಿತ್ರ ಮತ್ತು ಕಿರುತೆರೆ ನಟಿ

