ಬೆಳ್ತಂಗಡಿ ಧರ್ಮಪ್ರಾಂತ್ಯ ಧರ್ಮಾಧ್ಯಕ್ಷರಿಂದ ಡಾ. ಹೆಗ್ಗಡೆ ಭೇಟಿ
Wednesday, December 17, 2025
ಉಜಿರೆ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಕ್ಷೇತ್ರದ ಪರವಾಗಿ ಬಿಷಪ್ ಅವರನ್ನು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಅಭಿನಂದಿಸಿದರು.
ಬಿಷಪ್ ಅವರೊಂದಿಗೆ ಧರ್ಮಪ್ರಾಂತ್ಯದ ಚಾನ್ಸಲರ್ ವಂ. ಲಾರೆನ್ಸ್, ಫಾ. ಅಬ್ರಹಾಂ ಪಟ್ಟೇರಿಲ್, ಫಾ ಜೋಸೆಫ್ ವಾಳೂಕಾರನ್, ರುಡ್ ಸೆಟ್ ಉಪನ್ಯಾಸಕ ಅಬ್ರಹಾಂ ಜೇಮ್ಸ್, ಧರ್ಮಸ್ಥಳ ಚರ್ಚ್ ಪಾಲನಾ ಮಂಡಳಿ ಸದಸ್ಯರಾದ ಟಿ.ವಿ. ದೇವಸ್ಯ, ಜೋಮಿ ಹಾಗೂ ಇತರರು ಉಪಸ್ಥಿತರಿದ್ದರು.