ರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಎಸ್ ಡಿ ಎಂ ನ್ಯಾಚುರೋಪತಿ ವಿದ್ಯಾರ್ಥಿಗಳು

ರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಎಸ್ ಡಿ ಎಂ ನ್ಯಾಚುರೋಪತಿ ವಿದ್ಯಾರ್ಥಿಗಳು


ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ  ಮಹಾವಿದ್ಯಾಲಯದ  ವೈದ್ಯಕೀಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ  ಪುರುಷರ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. 

ಈ ಸ್ಪರ್ಧೆ ಡಿ.18ರಿಂದ 22ರವರೆಗೆ ಚೆನ್ನೈನ ವೇಲ್ಸ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದೆ.  ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ, ಉಪಪ್ರಾಂಶುಪಾಲೆ ಡಾ. ಸುಜಾತಾ ಕೆ.ಜೆ. ಹಾಗೂ ಯೋಗ ವಿಭಾಗದ ಡೀನ್ ಮತ್ತು ಶಾಂತಿವನದ ಮುಖ್ಯ ವೈದ್ಯಾಧಿಕಾರಿ  ಡಾ!ಶಿವಪ್ರಸಾದ್ ಶೆಟ್ಟಿ ವಿದ್ಯಾರ್ಥಿಗಳಿಗ ಮಾರ್ಗದರ್ಶನ ನೀಡಿ ಶುಭ ಹಾರೈಸಿದರು. ತಂಡದ ತರಬೇತುದಾರರಾಗಿ ಯೋಗ ವಿಭಾಗದ ಉದಯ ಸುಬ್ರಹ್ಮಣ್ಯ ಹಾಗೂ ತಂಡದ ವ್ಯವಸ್ಥಾಪಕರಾಗಿ ದೈಹಿಕ ಶಿಕ್ಷಣ ನಿರ್ದೇಶಕ  ಧರ್ಮೇಂದ್ರ ಕುಮಾರ್ ಅವರು ಭಾಗವಹಿಸುತ್ತಿದ್ದಾರೆ.

ಈ ಸ್ಪರ್ಧೆಯಲ್ಲಿ ಎಸ್‌ಡಿಎಂ ಬಿಎನ್ವೈಎಸ್ ಕಾಲೇಜಿನ ವಿದ್ಯಾರ್ಥಿಗಳಾದ ಡಾ. ಸ್ವಪ್ನಿಲ್, ಡಾ. ವಿಶ್ವಾಸ್, ಅಕ್ಷಯ್ ಕುಮಾರ್, ಮಾರ್ಕನ್, ಸ್ವರೂಪ್ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಇದೇ  ಸಂದರ್ಭದಲ್ಲಿ   ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ಮಹಾವಿದ್ಯಾಲಯದ ಉಪಕುಲಪತಿ ಡಾ. ಭಗವಾನ್   ರಾಷ್ಟ್ರೀಯ ಯೋಗ ತಂಡವನ್ನು ಸನ್ಮಾನಿಸಿದರು

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article