ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ: ಉಜಿರೆಯ ಎಸ್‌ಡಿಎಂ ಕಾಲೇಜಿಗೆ ಚಾಂಪಿಯನ್ ಪ್ರಶಸ್ತಿ-ದಕ್ಷಿಣ ವಲಯ ವಿಶ್ವವಿದ್ಯಾಲಯದ ಮಹಿಳೆಯರ ಪಂದ್ಯಕ್ಕೆ ಆಯ್ಕೆಗೊಂಡ ಎಸ್.ಡಿ.ಎಂ ತಂಡ
ಸೆಮಿ ಫೈನಲ್ ಪಂದ್ಯದಲ್ಲಿ ಮಂಗಳೂರಿನ ಯುನಿವರ್ಸಿಟಿ ಕ್ಯಾಂಪಸ್ ತಂಡವನ್ನು ಸೋಲಿಸಿದ ಎಸ್‌ಡಿಎಂ ತಂಡವು ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆಯಿತು. ಫೈನಲ್ ಪಂದ್ಯಟಾದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಮಹಿಳಾ ತಂಡವನ್ನು ಸುಮಾರು 11-8 ಅಂಕಗಳಿಂದ 3 ಗೋಲ್‌ಗಳ ಅಂತರದಲ್ಲಿ ಮಣಿಸಿ ಭರ್ಜರಿ ಜಯ ಸಾಧಿಸಿತು. ಎಸ್‌ಡಿಎಂ ಮಹಿಳಾ ತಂಡದ ಆಟಗಾರ್ತಿಯರಾದ ತೃತೀಯ ಬಿಎ ವಿದ್ಯಾರ್ಥಿನಿ ಧನುಶ್ರೀ ಉತ್ತಮ ಗೋಲ್ ಕೀಪರ್, ಪ್ರಥಮ ಬಿಬಿಎ ವಿದ್ಯಾರ್ಥಿನಿ ಪೂಜ ಉತ್ತಮ ಆಟಗಾರ್ತಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.
ಈ ಗೆಲುವಿನ ಮೂಲಕ ಮಾರ್ಚ್ ತಿಂಗಳಲ್ಲಿ ತಮಿಳುನಾಡಿನಲ್ಲಿ ನಡೆಯಲಿರುವ ದಕ್ಷಿಣ ವಲಯ ವಿಶ್ವವಿದ್ಯಾಲಯದ ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟಕ್ಕೆ ಆಯ್ಕೆಯನ್ನು ಪಡೆದುಕೊಂಡಿದೆ.
ಪ್ರಶಸ್ತಿ ಪಡೆದುಕೊಂಡ ಸಂದರ್ಭದಲ್ಲಿ ತಂಡದ ಆಟಗಾರ್ತಿಯರಾದ ವರ್ಷಿತಾ, ಪೂಜ, ರಶ್ಮೀ, ಪಲ್ಲವಿ, ಮನಿಷಾ, ಭೂಮಿಕಾ, ಧನುಶ್ರೀ ಮತ್ತು ಎಸ್‌ಡಿಎಂ ಮಹಿಳಾ ತಂಡದ ತರಬೇತುದಾರ ಎಸ್‌ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪೂಜಾರಿ ಉಪಸ್ಥಿತರಿದ್ದರು.
ವಿಜೇತ ತಂಡಕ್ಕೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ್ ಪಿ., ಎಸ್‌ಡಿಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ಉಪನ್ಯಾಸಕರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.