ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಹೆಗ್ಗಡೆ ಸಂತಾಪ

ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಹೆಗ್ಗಡೆ ಸಂತಾಪ

ಉಜಿರೆ: ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರು ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು.

ಶಾಸಕರಾಗಿ, ಸಚಿವರಾಗಿ, ಸಂಸದರಾಗಿ, ಅವರು ಶಿಕ್ಷಣ, ಆರೋಗ್ಯ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿ ಚಿರಪರಿಚಿತರಾಗಿದ್ದರು. ದಾವಣಗೆರೆ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಅಲ್ಲಿನ ಸರ್ವತೋಮುಖ ಪ್ರಗತಿಗೆ ಶ್ರಮಿಸಿದ್ದಾರೆ. 

ನಮ್ಮ ಕ್ಷೇತ್ರದ ಅಪಾರ ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ನಮ್ಮ ಎಲ್ಲಾ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸಿದ್ದಾರೆ.

ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಸಂತಾಪ ಸೂಚಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article