ಕಾರ್‌ಗೆ ಬೈಕ್ ಢಿಕ್ಕಿ: ಇಬ್ಬರು ಗಂಭೀರ
Friday, December 19, 2025
ಉಳ್ಳಾಲ: ಕಾರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರ್ ಬಳಿ ಬುಧವಾರ ಸಂಜೆ ನಡೆದಿದೆ.
ಗಾಯಗೊಂಡ ವರನ್ನು ನಿಖಿಲ್,ಗಗನ್ ಜೀತ್ ಎಂದು ಗುರುತಿಸಲಾಗಿದೆ.
ಇವರಿಬ್ಬರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರಿನ ಹಿಂಭಾಗಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಿಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ವಾಮಂಜೂರು ಮತ್ತು ದೇರಳಕಟ್ಟೆ ಮೂಲದವರು ಎಂದು ತಿಳಿದು ಬಂದಿದೆ
ಈ ಬಗ್ಗೆ ಮಂಗಳೂರು ಗ್ರಾಮಾಂತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.