ಗಾಂಜಾ ಮಾರಾಟ: ಆರೋಪಿ ಬಂಧನ
Tuesday, December 30, 2025
ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ಸೋಮೇಶ್ವರ ಗ್ರಾಮದ, ತಲಪಾಡಿ ರೈಲ್ವೇ ಟ್ರ್ಯಾಕ್ ಬಳಿ ಕಲ್ಪನೆ ಎಂಬಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ಹಸ್ಟೋಯಿ ಜಿಲ್ಲೆಯ ಜೂರಿ ಚಂದ್ರಾಪುರ್ ನಿವಾಸಿ ರಾಜ್ ಪಾಲ್ ಎಂದು ಗುರುತಿಸಲಾಗಿದೆ.
ಈತ ತನ್ನ ಊರಿನಿಂದ ಗಾಂಜಾ ತಂದು ಹಣಕ್ಕಾಗಿ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬುಧವಾರ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ 21 ಸಾವಿರ ಮೌಲ್ಯದ 450 ಗ್ರಾಮ್ ಗಾಂಜಾ, 650 ರೂ. ನಗದು ಹಾಗೂ ಒಂದು ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.