ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು
Monday, January 5, 2026
ಅರಂತೋಡು: ಬೈಕ್ ಅಪಘಾತವಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಆಲೆಟ್ಟಿ ಗ್ರಾಮದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂಬೂರು ಎಂಬಲ್ಲಿ ಡಿ.5ರ ಸೋಮವಾರ ನಡೆದಿದೆ.
ಸಲ್ಮಾನ್ ಸಾವನ್ನಪ್ಪಿದ ವ್ಯಕ್ತಿ.
ಸೋಮವಾರ ಮಧ್ಯಾಹ್ನ ಅಪಘಾತ ನಡೆದಿತ್ತು. ಸಲ್ಮಾನ್ ಬೈಕ್ ಚಲಾಯಿಸಿಕೊಂಡು ಅರಂಬೂರು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಬೈಕ್ ರಸ್ತೆ ಬದಿಯ ತಡೆ ಬೇಲಿಗೆ ಗುದ್ದಿದ ಪರಿಣಾಮ ಸವಾರ ರಸ್ತೆಗೆ ಎಸೆಯಲ್ಪಟ್ಟರು. ಇದರಿಂದಾಗಿ ಬೈಕ್ ಪಲ್ಟಿಯಾಗಿ ಸಲ್ಮಾನ್ ರಿಗೆ ತಲೆ ಭಾಗಕ್ಕೆ ಗಂಭೀರ ಗಾಯವಾಗಿತ್ತು.
ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.