ಖಾಲಿ ಹುದ್ದೆಗಳನ್ನು ಭರ್ತಿಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮನವಿ
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು, 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿಗೊಳಿಸಲು ಅಗತ್ಯ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದರಿಂದ ಉದ್ಯೋಗಾಕಾಂಕ್ಷಿ ಯುವಜನತೆಗೆ ಸರ್ಕಾರಿ ಉದ್ಯೋಗಾವಕಾಶ ಸಿಗುವುದರ ಜೊತೆಗೆ, ಖಾಲಿ ಹುದ್ದೆಗಳ ಭರ್ತಿಯಿಂದ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳು ಸುಗಮವಾಗಿ ಲಭ್ಯವಾಗಲಿದ್ದು, ಆಡಳಿತ ವ್ಯವಸ್ಥೆಯೂ ಇನ್ನಷ್ಟು ಪರಿಣಾಮಕಾರಿಯಾಗಲಿದೆ ಎಂಬುದನ್ನು ಅವರು ಸರ್ಕಾರದ ಗಮನಕ್ಕೆ ತಂದಿದ್ದಾರೆ.
ಈ ಕುರಿತು ಕ್ರಮ ಕೈಗೊಳ್ಳುವಂತೆ ಕೋರಿ, ಶಾಸಕರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಖಾಲಿ ಹುದ್ದೆಗಳ ಭರ್ತಿಯು ಯುವಜನತೆಗೆ ಉದ್ಯೋಗ ಭದ್ರತೆ ಒದಗಿಸುವುದರ ಜೊತೆಗೆ ರಾಜ್ಯದ ಆಡಳಿತ ಬಲಪಡಿಸುವುದಾಗಿ ಅವರು ಮನವಿಯಲ್ಲಿ ತಿಳಿಸಿದರು.
ಶಾಸಕರ ಮನವಿಗೆ ಸ್ಪಂದಿಸಿದ ಮುಖ್ಯ ಕಾರ್ಯದರ್ಶಿಯವರು, ಈ ವಿಷಯವನ್ನು ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ, ಬೇಡಿಕೆಯಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.