ಟ್ಯಾಂಕರ್‌ಗೆ ಟೆಂಪೋ ಢಿಕ್ಕಿ
Wednesday, January 14, 2026
ಬಂಟ್ವಾಳ: ಖಾಸಗಿ ಸಂಸ್ಥೆಗೆ ಸೇರಿದ ಟೆಂಪೋ ಅನಿಲಸಾಗಾಟದ ಟ್ಯಾಂಕರ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.
ಕಲ್ಲಡ್ಕ ಫ್ಲೈ ಓವರ್‌ನಲ್ಲಿ ಅತಿವೇಗದಿಂದ ಬಂದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್‌ಗೆ ಹಿಂದಿನಿಂದ ಡಿಕ್ಕಿಯಾಗಿದ್ದು, ಪರಿಣಾಮ ಚಾಲಕನ ಕೈ ವಾಹನಗಳ ನಡುವೆ ಸಿಲುಕಿದೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿದ 112 ವಾಹನದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಸ್ಥಳೀಯರ ನೆರವಿನೊಂದಿಗೆ ಚಾಲಕನನ್ನು ಹೊರತರುವಲ್ಲಿ ಯಶಸ್ವಿಯಾದರು.
ಗ್ಯಾಸ್ ಟ್ಯಾಂಕರ್ ಢಿಕ್ಕಿಯಾದ ಹಿನ್ನಲೆಯಲ್ಲಿ ಅನಿಲ ಸೋರಿಕೆಯ ಆತಂಕವುಂಟಾದುದರಿಂದ ಬಂಟ್ವಾಳ ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಸೂಕ್ತ ಪರಿಹಾರ ಕಾರ್ಯಾ ನಡೆಸಿತು.