ಬಂಟ್ವಾಳ ನ್ಯಾಯಾಲಯದಲ್ಲಿ ‘ಇ-ಸೇವಾ ಕೇಂದ್ರ’ದ ಉದ್ಘಾಟನೆ
Wednesday, January 21, 2026
ಬಂಟ್ವಾಳ: ದ.ಕ. ಜಿಲ್ಲಾ ನ್ಯಾಯಾಲಯ ಮಂಗಳೂರು ಮತ್ತು ಬಂಟ್ವಾಳ ವಕೀಲರ ಸಂಘ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ನ್ಯಾಯಾಲಯ ಆವರಣದಲ್ಲಿ ನೂತನವಾಗಿ ನಿರ್ಮಾಣವಾದ ಕಟ್ಟಡದಲ್ಲಿ ‘ಇ-ಸೇವಾ ಕೇಂದ್ರ, ಸಹಾಯ ಡೆಸ್ಕ್, ವಿ.ಸಿ. ಕೇಬಿನ್’ನ್ನು ಬುಧವಾರ ದ.ಕ. ಜಿಲ್ಲಾ ಪ್ರಧಾನ ಮತ್ತು ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ಉದ್ಘಾಟಿಸಿದರು.
ಬಳಿಕ ಅವರು ಮಾತನಾಡಿ, ಕೇಂದ್ರದ ಮೂಲಕ ಸಿಗುವ ಸೌಲಭ್ಯಗಳನ್ನು ವಕೀಲರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಬಂಟ್ವಾಳ ಹಿರಿಯ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಧೀಶರಾದ ಅನಿಲ್ ಪ್ರಕಾಶ್ ಎಂ.ಪಿ., ಬಂಟ್ವಾಳ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಧೀಶರಾದ ರಾಜೇಂದ್ರ ಕೆ.ಎಸ್., ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೋಸ್ತಾ ಎಂ., ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ಕೆ. ನರೇಂದ್ರನಾಥ ಭಂಡಾರಿ ಸ್ವಾಗತಿಸಿ, ವಂದಿಸಿದರು.