ಗಾಂಜಾ ಸೇವನೆ: ಮೂವರ ಬಂಧನ
ಬಂಟ್ವಾಳ: ಸಜೀಪನಡು ಗ್ರಾಮದ ಕಂಚಿನಡ್ಕಪದವಿನ ಸಾರ್ವಜನಿಕ ಸ್ಥಳದಲ್ಲಿ ಮೂವರು ಮಾದಕ ವಸ್ತು ಸೇವಿಸಿ ನಶೆಯಲ್ಲಿ ತೂರಾಡುತ್ತಿದ್ದ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ಸಂಜೆ ಬಂದ ಮಾಹಿತಿಯನ್ನಾಧರಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಮತ್ತವರ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದಾಗ ಸಾರ್ವಜನಿಕ ರಸ್ತೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ವಶಕ್ಕೆ ಪಡೆದು ಹೆಸರು, ವಿಳಾಸವನ್ನು ವಿಚಾರಿಸಿದ್ದಾರೆ.
ಸಜೀಪಮುನ್ನೂರು ಗ್ರಾಮದ ಮಹಮ್ಮದ್ ತೌಸೀಫ್ (26) ಮೂಲತಃ ಪುದು ಗ್ರಾಮದ ನಿವಾಸಿ ಪ್ರಸ್ತುತ ಪಾಣೆಮಂಗಳೂರಿನಲ್ಲಿ ವಾಸವಿರುವ ಜಾಫರ್ ಶರೀಫ್ (32) ನಾಟೆಕಲ್ ಗ್ರಾಮದ ಮಂಜನಾಡಿ ನಿವಾಸಿ ಮಹಮ್ಮದ್ ಬಶೀರ್ (35) ಎಂಬವರನ್ನು ತೀವ್ರ ವಿಚಾರಣೆಗೊಳಪಡಿಸಿದಾಗ ಮಾದಕ ವಸ್ತು ಗಾಂಜಾ ಸೇವಿಸಿರುವ ಅನುಮಾನ ಬಂದ ಹಿನ್ನೆಲೆಯಲ್ಲಿ, ಮೂವರನ್ನು ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದ್ದು, ಆಗ ಮೂವರು ಗಾಂಜಾ ಸೇವಿಸಿರುವುದು ದೃಢಪಟ್ಟಿರುತ್ತದ್ದು, ತಕ್ಷಣ ಮೂವರನ್ನು ಬಂಧಿಸಲಾಗಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.