ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಪೂರಕ ಮಾಹಿತಿ ಕಾರ್ಯಾಗಾರ
Saturday, January 10, 2026
ಬಂಟ್ವಾಳ: ವಿದ್ಯಾರ್ಥಿಗಳು ಕ್ರಮಬದ್ಧವಾಗಿ ಅಧ್ಯಯನ ಮಾಡುವ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿ ಶಾಲೆಗೆ ಮತ್ತು ಹೆತ್ತವರಿಗೆ ಕೀರ್ತಿಯನ್ನು ತರಬೇಕು. ಸಮಯವನ್ನು ವ್ಯರ್ಥ ಮಾಡದೆ ಪರೀಕ್ಷೆಯ ಸಿದ್ದತೆಯಲ್ಲಿ ತೊಡಗಿಸಿಕೊಂಡು ಯಶಸ್ವಿಯಾಗಬೇಕು ಎಂದು ಕರ್ನಾಟಕ ಪ್ರೌಢ ಶಾಲೆ ಮಾಣಿ ಇದರ ಸಂಚಾಲಕ ಇಬ್ರಾಹಿಂ ಕೆ. ಮಾಣಿ ಹೇಳಿದರು.
ಅವರು ಮಾಣಿ ಲಯನ್ಸ್ ಕ್ಲಬ್ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ಮಾಹಿತಿ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಜನಾರ್ದನ ಪೆರಾಜೆ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗಾಗಿ ಪ್ರಶ್ನೆ ಕೋಠಿ ಪುಸ್ತಕವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ನಿವೃತ್ತ ಶಿಕ್ಷಕ ರೊನಾಲ್ಡ್ ಮೊನಿಸ್ ಸಿದ್ಧತಾ ಪರೀಕ್ಷೆಯ ಬಗ್ಗೆ ತಿಳಿಸಿದರು.
ಜೆಸಿಐ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದರು.
ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಪದಾಧಿಕಾರಿಗಳಾದ ರಾಜೇಶ್ ಶೆಟ್ಟಿ, ಸಚ್ಚಿದಾನಂದ ರೈ ಪಾಳ್ಯ, ಮುಖ್ಯೋಪಾಧ್ಯಾಯರಾದ ಚೆನ್ನಪ್ಪ ಗೌಡ, ಸಹಶಿಕ್ಷಕ ಜಯರಾಮ್ ಕಾಂಚನ್ ಉಪಸ್ಥಿತರಿದ್ದರು.