ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನಕ್ಕೆ ವಂದಿತಾ ಆಯ್ಕೆ
Tuesday, January 6, 2026
ಬಂಟ್ವಾಳ: ಇಲ್ಲಿನ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವಂದಿತಾ ಅವರು 2025-26ನೇ ಸಾಲಿನ ಪ್ರತಿಷ್ಠಿತ ರಾಷ್ಟ್ರ ಮಟ್ಟದ ‘ರಿಲಯನ್ಸ್ ಫೌಂಡೇಶನ್ ಸ್ಕಾಲರ್‌ಶಿಪ್’ಗೆ ಆಯ್ಕೆಯಾಗಿದ್ದು, ಒಂದೂವರೆ ಲಕ್ಷ ವಿದ್ಯಾರ್ಥಿವೇತನವನ್ನು ಪಡೆದಿರುತ್ತಾರೆ.
ಇವರನ್ನು ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೂಡಿಗೆ ಪಾಂಡುರಂಗ ಶೆಣೈ, ಕಾರ್ಯದರ್ಶಿ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಅನಿರುದ್ಧ್ ಕಾಮತ್, ಶ್ರೀ ವೆಂಕಟರಮಣ ಸ್ವಾಮೀ ಸಮೂಹ ಸಂಸ್ಥೆಗಳ ಸಂಚಾಲಕಿ ಕೆ. ರೇಖಾ ಶೆಣೈ, ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.