ಅಂಗಾಂಗ ದಾನಗೈದ ಮಹಿಳೆಗೆ ಗೌರವಾರ್ಪಣೆ
Wednesday, January 28, 2026
ಬಂಟ್ವಾಳ: ಮೆದುಳಿನ ರಕ್ತ ಸ್ರಾವದಿಂದ ಕೋಮಾದ ಪರಿಸ್ಥಿತಿಯಲ್ಲಿದ್ದ ತನ್ನ ಅವಿವಾಹಿತ ಮಗಳ ಅಂಗಾಂಗಗಳಾದ ಹೃದಯ, ಶ್ವಾಸಕೋಶ, ಕಿಡ್ನಿ, ಲಿವರ್ ಹಾಗೂ ಕಣ್ಣುಗಳನ್ನು ದಾನ ಮಾಡುವ ಮೂಲಕ ಇತರರ ಜೀವಗಳಿಗೆ ಜೀವದಾನ ನೀಡಿದ ಮಮತಾ ಶೆಟ್ಟಿಯವರ ಧೈರ್ಯ ಮತ್ತು ದಿಟ್ಟ ನಿರ್ಧಾರ ಇತರ ತಾಯಂದಿರಿಗೆ ಮಾದರಿಯಾದ ಹಿನ್ನೆಲೆ ಅವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಸಂಘದಿಂದ ಗೌರವಿಸಲಾಯಿತು.
ಸಂಘದ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಮತಾ ಶೆಟ್ಟಿ ಅವರನ್ನು ಅಭಿನಂದಿಸಿ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು.
ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಉಪಾಧ್ಯಕ್ಷ ಸಂದೇಶ ಶೆಟ್ಟಿ, ನಿರ್ದೇಶಕರಾದ ರಶ್ಮಿತ್ ಶೆಟ್ಟಿ, ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ್ ಶೆಟ್ಟಿಗಾರ್, ಶಿವ ಗೌಡ, ವೀರಪ್ಪ ಪರವ, ಜಾರಪ್ಪ ನಾಯ್ಕ, ರಾಜೇಶ್ ಶೆಟ್ಟಿ ನವೀನ ಹೆಗ್ಡೆ, ಮಂದಾರತಿ ಶೆಟ್ಟಿ, ಪುಷ್ಪಲತಾ ಎಸ್.ಆರ್., ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಮಮತಾ ಶೆಟ್ಟಿ ಅವರ ಸಹೋದರ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.