ಕಾರ್ಮಿಕ ಮುಖಂಡ ಸಂಜೀವ ಬಂಗೇರ ನಿಧನ
Wednesday, January 14, 2026
ಬಂಟ್ವಾಳ: ಇಲ್ಲಿಗೆ ಸಮೀಪದ ಜಕ್ರಿಬೆಟ್ಟು ನಿವಾಸಿ, ಕಾರ್ಮಿಕ ಮುಖಂಡ, ಸಿಪಿಐ(ಎಂ) ಪಕ್ಷದ ಹಿರಿಯ ಧುರೀಣ ಬಂಟ್ವಾಳ ಸಂಜೀವ ಬಂಗೇರ (87) ಅವರು ವಯೋ ಸಹಜ ಅನಾರೋಗ್ಯದಿಂದ ತಮ್ಮ ಸ್ವಗೃಹದಲ್ಲಿ ನಿಧನರಾದರು.
ದ.ಕ. ಜಿಲ್ಲೆಯಲ್ಲಿ ಸಿಪಿಐ(ಎಂ) ಪಕ್ಷದಲ್ಲಿ ಸಕ್ರಿಯರಾಗಿದ್ದ ಇವರು ಬಂಟ್ವಾಳ ತಾಲೂಕು ಬೀಡಿ ಕೆಲಸಗಾರರ ಸಂಘ (ಸಿಐಟಿಯು)ದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಹಲವು ಜನಪರ ಹೋರಾಟಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಮೃತರು ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಬಂಟ್ವಾಳ ಪುರಸಭಾ ಮಾಜಿ ಸದಸ್ಯ ಪ್ರವೀಣ್ ಬಿ. ಸಹಿತ ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಸಹಿತ ಹಲವಾರು ಗಣ್ಯರು ಮೃತರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.