ದಶ್ಚಟಗಳ ದಾಸರಾಗದೆ ಸಮಾಜದ ಸ್ವಾಸ್ಥ್ಯ ಕಾಪಾಡಿ: ಪುರುಷೋತ್ತಮ ಪೂಜಾರಿ
Sunday, January 4, 2026
ಬಂಟ್ವಾಳ: ಪೋಷಕರು ಮಕ್ಕಳ ಭವಿಷ್ಯದ ಬಗ್ಗೆ ಅನೇಕ ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಅದನ್ನು ಅರ್ಥ ಮಾಡಿಕೊಂಡು ಬಂಟ್ವಾಳ, ಪೋಷಕರು ಮಕ್ಕಳ ಭವಿಷ್ಯದ ಬಗ್ಗೆ ಅನೇಕ ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಅದನ್ನು ಅರ್ಥ ಮಾಡಿಕೊಂಡು ಮಕ್ಕಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ದುಶ್ಚಟ, ದುರಭ್ಯಾಸಗಳಿಗೆ ದಾಸರಾಗದೆ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಶ್ರಮಿಸಬೇಕು ಎಂದು ಸರಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ಕಾರ್ಯಧ್ಯಕ್ಷ ಪುರುಷೋತ್ತಮ ಪೂಜಾರಿ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇದರ ಆಶ್ರಯದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವಗ್ಗ ವಲಯ ಇದರ ಆಶ್ರಯದಲ್ಲಿ ಸರಪಾಡಿ ಸರಕಾರಿ ಪ್ರೌಡಶಾಲೆಯಲ್ಲಿ ಮಂಗಳವಾರ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜೆಸಿಐ ವಲಯ ತರಬೇತುದಾರ ಸಂದೀಪ್ ಸಾಲ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಸ್ವಾಸ್ಥ್ಯ ಸಂಕಲ್ಪದ ಮಾಹಿತಿ ನೀಡಿದರು. ಶಾಲೆಯ ಎಸ್‌ಡಿಎಂಸಿ ನಿಕಟ ಪೂರ್ವ ಕಾರ್ಯಧ್ಯಕ್ಷ ಗಿರಿಧರ್, ಸೇವಾನಿರತೆ ಮೋಹಿನಿ, ದೈಹಿಕ ಶಿಕ್ಷಕ ಅಖಿಲ್ ಶೆಟ್ಟಿ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳದ ಕೃಷಿ ಅಧಿಕಾರಿ ಭಾಸ್ಕರ್ ಪ್ರಾಸ್ತವಿಕವಾಗಿ ಮಾತನಾಡಿದರು. ಶಾಲಾ ಶಿಕ್ಷಕ ಆದಂ ಸ್ವಾಗತಿಸಿದರು. ಸಹಶಿಕ್ಷಕಿ ಕಿಶೋರಿ ಕಾರ್ಯಕ್ರಮ ನಿರೂಪಿಸಿದರು.