ಪಾದಚಾರಿಗೆ ಕಾರು ಢಿಕ್ಕಿ: ಗಂಭೀರ ಗಾಯ
Saturday, January 10, 2026
ಬಂಟ್ವಾಳ: ರಸ್ತೆ ದಾಟುತ್ತಿದ್ದ ಪಾದಚಾರಿಯೋರ್ವರಿಗೆ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳಕ್ಕೆ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ಸಂಭವಿಸಿದೆ.
ಗಾಯಾಳು ಪಾದಚಾರಿಯನ್ನು ಪಿಲಾತಬೆಟ್ಟು ಗ್ರಾಮದ ನೈನಾಡ ನಿವಾಸಿ ಗ್ರೇಗರಿ ಉರ್ಬನ್ ಪಿಂಟೋ (64) ಎಂದು ಹೆಸರಿಸಲಾಗಿದೆ. ಇವರು ಜಕ್ರಿಬೆಟ್ಟು ಎಂಬಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ಬೆಳ್ತಂಗಡಿ ಕಡೆಯಿಂದ ಬಿಸಿ ರೋಡಿನತ್ತ ಸಂಚರಿಸುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಗ್ರೇಗರಿ ಅರ್ಬನ್ ಪಿಂಟೋ ಅವರು ಕಾರಿನ ಎದುರಿನ ಗ್ಲಾಸ್ ಮೇಲೆ ಬಿದ್ದು ಬಳಿಕ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.