ಗಾಂಜಾ ಸೇವಿಸಿ ತೂರಾಡುತ್ತಿದ್ದಾತನ ಬಂಧನ
Saturday, January 10, 2026
ಬಂಟ್ವಾಳ: ತಾಲೂಕಿನ ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು ಎಂಬಲ್ಲಿ ವ್ಯಕ್ತಿಯೋರ್ವ ಮಾದಕ ವಸ್ತು ಗಾಂಜಾ ಸೇವಿಸಿ ತೂರಾಡಿಕೊಂಡು ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಬಡಗಕಜೆಕಾರು ಗ್ರಾಮದ ಕೋಮಿನಡ್ಕ ನಿವಾಸಿ ಹೈದರ್ (30) ಬಂಧಿತನಾಗಿದ್ದಾನೆ.
ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್‌ಐ ಮತ್ತವರ ಸಿಬ್ಬಂದಿಗಳು ವಾಹನ ತಪಾಸಣೆಯಲ್ಲಿ ನಿರತರಾಗಿದ್ದಾಗ ಆರೋಪಿ ಪಾಂಡವರಕಲ್ಲು ಬಳಿ ತೂರಾಡಿಕೊಂಡು ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದು, ಈತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಮಾದಕ ವಸ್ತುವಾದ ಗಾಂಜಾವನ್ನು ಬೀಡಿಯಲ್ಲಿ ತುಂಬಿಸಿ ಸೇದಿರುವುದನ್ನು ಒಪ್ಪಿಕೊಂಡಿದ್ದಾನೆ.
ನಂತರ ಆತನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆರೋಪಿ ಹೈದರ್ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.