ಅಶೋಕ ಕುಮಾರ್ ಬರಿಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ
Saturday, January 24, 2026
ಬಂಟ್ವಾಳ: ದ.ಕ. ಜಿಲ್ಲಾಡಳಿತ, ದ.ಕ. ಜಿ.ಪಂ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ 2025-26ರ ಈಜು ಸ್ಪರ್ಧೆ 100 ಮೀ. ಬ್ಯಾಕ್ ಸ್ಟ್ರೋಕ್‌ನಲ್ಲಿ ಮತ್ತು 4*100 ಫ್ರೀ ಸ್ಟೈಲ್ ರಿಲೇಯಲ್ಲಿ ಕಂಚು ಹಾಗೂ 100 ಮೀ ಬಟರ್ ಫ್ಲೈನಲ್ಲಿ ಚಿನ್ನದ ಪದಕ ಪಡೆದಿರುವ ಬಂಟ್ವಾಳ ತಾ.ಪಂ.ನ ಗ್ರಾಮ ಪಂಚಾಯತ್ ಕಾರ್ಯದರ್ಶಿ ಅಶೋಕ ಕುಮಾರ್ ಬರಿಮಾರ್ ಅವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಮಂಗಳ ಈಜು ಕೊಳದ ತರಬೇತುದಾರರಾದ ರೇಷ್ಮೆ ಇಲಾಖೆಯ ನಿವೃತ್ತ ಇನ್‌ಸ್ಪೆಕ್ಟರ್ ಬಿ.ಕೆ. ನಾಯ್ಕ್ ಅವರಿಂದ ತರಬೇತಿಯನ್ನು ಪಡೆದಿರುತ್ತಾರೆ.