ಕೊಳಲಬಾಕಿಮಾರು ಶಾಲೆಯಲ್ಲಿ ‘ಸಾಲುಮರದ ತಿಮ್ಮಕ್ಕ ಇಕೋ ಕ್ಲಬ್’ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ
ಬಂಟ್ವಾಳ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ಕೊಳಲಬಾಕಿಮಾರು ಇಲ್ಲಿನ ‘ಸಾಲುಮರದ ತಿಮ್ಮಕ್ಕ ಇಕೋ ಕ್ಲಬ್’ ಘಟಕದ ವತಿಯಿಂದ 2025-26ನೇ ಸಾಲಿನ ಚಟುವಟಿಕೆಯ ಅಂಗವಾಗಿ ಆಯೋಜಿಸಲಾಗಿದ್ದ ‘ಗಿಡ ನೆಟ್ಟು ಪೋಷಿಸುವುದು’ ಎಂಬ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ವಿಮಲಾ ಅವರು ಮಾತನಾಡಿ, ಗಿಡಗಳನ್ನು ನೆಡುವುದು ಎಷ್ಟು ಮುಖ್ಯವೋ, ಅವುಗಳನ್ನು ಮಕ್ಕಳಂತೆ ಪೋಷಿಸುವುದು ಅಷ್ಟೇ ಮುಖ್ಯ ಎಂದರು.
ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷ ಮಂಜುನಾಥ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಸಂಕಲ್ಪ ಬೋಧಿಸಿದರು.
ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ರಾಜೇಶ ಕೆ. ಸ್ವಾಗತಿಸಿದರು. ಅತಿಥಿ ಶಿಕ್ಷಕಿ ನಿಕಿತ ಕೆ. ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಆವರಣದಲ್ಲಿ ವಿವಿಧ ಜಾತಿಯ ಹಣ್ಣು ಮತ್ತು ನೆರಳಿನ ಗಿಡಗಳನ್ನು ನೆಡಲಾಯಿತು. ವಿದ್ಯಾರ್ಥಿಗಳು ತಾವೇ ನೆಟ್ಟ ಗಿಡಗಳಿಗೆ ನೀರೆರೆಯುವ ಮೂಲಕ ಪರಿಸರ ಕಾಳಜಿ ಮೆರೆದರು.
ಕಾರ್ಯಕ್ರಮದಲ್ಲಿ ‘ನಮ್ಮ ಉಸಿರು-ಈ ಹಸಿರು’, ‘ಮರ ಬೆಳೆಸಿ-ಮಳೆ ತರಿಸಿ’ ಎಂಬ ಘೋಷವಾಕ್ಯಗಳೊಂದಿಗೆ ಪರಿಸರ ಜಾಗೃತಿ ಮೂಡಿಸಲಾಯಿತು.