ಕರ್ಣಾಟಕ ಬ್ಯಾಂಕ್ ವತಿಯಿಂದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗೆ ಬಸ್ಸ್ ಕೊಡುಗೆ
ಬಳಿಕ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಬಸ್ಸನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಸಮ್ಮುಖದಲ್ಲಿ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ನೀಡಿದರು.
ಇದೇ ಸಂದರ್ಭದಲ್ಲಿ ಹೆಗ್ಗಡೆಯವರು ಕರ್ಣಾಟಕ ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ಅವರಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ (ಐಆರ್) ಶ್ರೀನಿವಾಸ್ ಮೂರ್ತಿ ಎಮ್., ಪುತ್ತೂರು ವಿಭಾಗದ ಕ್ಲಸ್ಟರ್ ಹೆಡ್ ಮತ್ತು ಮುಖ್ಯ ವ್ಯವಸ್ಥಾಪಕ ಶ್ರೀಹರಿ, ಉಜಿರೆ ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ರಾಮಕೃಷ್ಣ ವಿ.ಯು., ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಹಣಕಾಸು ಅಧಿಕಾರಿ ಅರವಿಂದ ಭಗವತ್ ಪಿ., ನಿಶ್ಚಿತ್ ಕುಮಾರ್, ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ., ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಸೇರಿದಂತೆ ಎಸ್‌ಎಮ್‌ಎಲ್ ಕಂಪೆನಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಕರ್ಣಾಟಕ ಬ್ಯಾಂಕ್ ಎಂ.ಡಿ. ಭೇಟಿ:
ಈ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ಅವರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅಭಿನಂದಿಸಿದರು.

