16ನೇ ರಾಷ್ಟ್ರೀಯ ಮತದಾರರ ದಿನಾಚರಣೆ

16ನೇ ರಾಷ್ಟ್ರೀಯ ಮತದಾರರ ದಿನಾಚರಣೆ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಯೋಗದಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಭಾನುವಾರ ನಡೆಯಿತು.


ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ್, ಮತಪತ್ರವು ಬುಲೆಟ್‌ಗಿಂತ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಪ್ರತಿಯೊಬ್ಬ ಮತದಾರರು ತಮ್ಮ ಮತವನ್ನು ಚಲಾಯಿಸುವ ಮೂಲಕ ಹಕ್ಕನ್ನು ಚಲಾಯಿಸಬೇಕು ಎಂದರು.


ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕ ಅನಿಲ್ ಭೂಮ ರೆಡ್ಡಿ ಮಾತನಾಡಿ, ಅತ್ಯಂತ ಕ್ಲಿಷ್ಟಕರ ಪ್ರದೇಶಗಳಲ್ಲಿಯೂ ಸಹ ಅಧಿಕಾರಿಗಳು ಮತದಾನದ ಮಹತ್ವದ ಬಗ್ಗೆ ಜಾಗೃತಿ ಮಾಡುತ್ತಿದ್ದಾರೆ. ಹಾಗಾಗಿ ಪ್ರತಿಯೊಬ್ಬರು ತಮ್ಮ ಹಕ್ಕನ್ನು ಚಲಾಯಿಸಿ, ಇತರರಿಗೂ ಮತದಾನದ ಅರಿವನ್ನು ಮೂಡಿಸಬೇಕೆಂದು ತಿಳಿಸಿದರು.


ದ.ಕ. ಅಪರ ಜಿಲ್ಲಾಧಿಕಾರಿ ರಾಜು ಕೆ. ಅಧ್ಯಕ್ಷತೆ ವಹಿಸಿದ್ದರು.


ಹಿರಿಯ ಸಿವಿಲ್ ನ್ಯಾಯಾಧಿಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.


ದ.ಕ. ಡಿಡಿಪಿಯು ರಾಜೇಶ್ವರಿ, ಡಿಡಿಪಿಐ ಶಶಿಧರ್, ತಹಶೀಲ್ದಾರ್ ರಮೇಶ್ ಬಾಬು ಉಪಸ್ಥಿತರಿದ್ದರು. 18 ವರ್ಷ ಪೂರೈಸಿದ ವಿದ್ಯಾರ್ಥಿಗಳಿಗೆ ಈ ವೇಳೆ ಮತದಾರರ ಕಾರ್ಡ್‌ಗಳನ್ನು ವಿತರಿಸಲಾಯಿತು. ಚುನಾವಣಾ ಸಂಧರ್ಭ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಬಿ.ಎಲ್‌ಒಗಳನ್ನು ಸನ್ಮಾನಿಸಲಾಯಿತು. ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article