ಕರ್ತವ್ಯದ ವೇಳೆಯಲ್ಲಿ ವಿದ್ಯುತ್ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಅವಲಂಬಿತರಿಗೆ 1 ಕೋಟಿ ರೂ. ಮೊತ್ತದ ವಿಮಾ ಚೆಕ್ ವಿತರಣೆ
Tuesday, January 6, 2026
ಮಂಗಳೂರು: ಬೆಳ್ತಂಗಡಿ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೆಸ್ಕಾಂ ಉದ್ಯೋಗಿ ವಿಜೇಶ್ ಕುಮಾರ್ ಅವರು ಕರ್ತವ್ಯ ನಿರತ ಸಂದರ್ಭದಲ್ಲಿ ಸಂಭವಿಸಿದ ವಿದ್ಯುತ್ ಅಪಘಾತದಲ್ಲಿ ಮೃತಪಟ್ಟಿದ್ದು, ಅವರ ಅವಲಂಬಿತರಿಗೆ 1 ಕೋಟಿ ರೂ. ಮೊತ್ತದ ವಿಮಾ ಚೆಕ್ಕನ್ನು ಜ.6 ರಂದು ಮೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ವಿತರಿಸಲಾಯಿತು.
ಕೆನರಾ ಬ್ಯಾಂಕ್‌ನಲ್ಲಿ ವೇತನ ಉಳಿತಾಯ ಖಾತೆ ಹೊಂದುವ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿಗಳಿಗೆ ವೈಯಕ್ತಿಕ ಗುಂಪು ಅಪಘಾತ ವಿಮಾ ಸೌಲಭ್ಯವನ್ನು ನೀಡಲಾಗುತ್ತಿದೆ.
ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಜಯಕುಮಾರ್ ಆರ್., ಕೆನರಾ ಬ್ಯಾಂಕ್ ಮಂಗಳೂರು ವೃತ್ತದ ಮಹಾ ಪ್ರಬಂಧಕ ಮಂಜುನಾಥ್ ಸಿಂಘೈ ಅವರುಗಳು ಚೆಕ್ಕನ್ನು ಮೃತರ ತಾಯಿ ಪೂರ್ಣಿಮಾ ಅವರಿಗೆ ಹಸ್ತಾಂತರಿಸಿದರು.
ಮೆಸ್ಕಾಂ ತಾಂತ್ರಿಕ ನಿರ್ದೇಶಕ ಹರೀಶ್ ಕುಮಾರ್ ವಿ., ಮುಖ್ಯ ಆರ್ಥಿಕ ಅಧಿಕಾರಿ ಮುರಳೀಧರ ನಾಯಕ್, ಅರ್ಥಿಕ ಸಲಹೆಗಾರರಾದ ದೇವರಾಜ್, ಪ್ರಧಾನ ವ್ಯವಸ್ಥಾಪಕ ಡಾ. ಮಂಜುನಾಥ ಸ್ವಾಮಿ, ಮಂಗಳೂರು ವಲಯದ ಮುಖ್ಯ ಇಂಜಿನಿಯರ್ ರವಿಕಾಂತ್ ಆರ್. ಕಾಮತ್, ಮಂಗಳೂರು ವೃತ್ತದ ಅಧೀಕ್ಷಕ ಇಂಜಿನಿಯರ್ (ವಿ) ಕೃಷ್ಣರಾಜ್ ಕೆ., ಬಂಟ್ವಾಳ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಸಂತೋಷ್ ನಾಯ್ಕ್, ನೌಕರ ಸಂಘದ ಉಪಾಧ್ಯಕ್ಷ ಶಂಕರ್ ಪ್ರಕಾಶ್, ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ ಶೆಟ್ಟಿ ಉಪಸ್ಥಿತರಿದ್ದರು.