ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ‘ಕನ್ನಡ ಪಯಸ್ವಿನಿ ಅವಾರ್ಡ್-2026’ ಪ್ರದಾನ
ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 32 ವರ್ಷ ಕ್ರೀಡಾ ಅಂಕಣಕಾರರಾಗಿ ಹಾಗೂ ಕ್ರೀಡಾ ವಿಮರ್ಶಾತ್ಮಕ ಲೇಖನಗಳ ಮೂಲಕ ಗುರುತಿಸಿಕೊಂಡಿರುವ ಎಸ್. ಜಗದೀಶ್ಚಂದ್ರ ಅಂಚನ್ ಕಾಸರಗೋಡು ನುಳ್ಳಿಪಾಡಿಯಲ್ಲಿ ನಡೆದ ಕನ್ನಡ ಭವನ ರಜತ ಸಂಭ್ರಮ-ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಿದರು.
ಕನ್ನಡ ಭವನ ಸ್ಥಾಪಕಾಧ್ಯಕ್ಷ ಡಾ. ಕೆ. ವಾಮನ್ ರಾವ್, ನಿರ್ದೇಶಕ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಕರ್ನಾಟಕ ಬ್ಯಾರಿ ಅಕಾಡೆಮಿಯ ಮಾಜಿ ಅಧ್ಯಕ್ಷೆ ಆಯಿಷಾ ಪೆರ್ಲ, ಶಿಕ್ಷಣ ತಜ್ಞ ವಿ.ಬಿ. ಕುಳವರ್ಮ, ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟ್ಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಸಾಹಿತಿ ಜಯಾನಂದ ಪೆರಾಜೆ, ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಚುಟುಕು ಸಾಹಿತ್ಯ ಪರಿಷತ್ ಮೈಸೂರು ಜಿಲ್ಲಾಧ್ಯಕ್ಷೆ ಡಾ. ರತ್ನಾ ಹಾಲಪ್ಪ ಗೌಡ, ಕನ್ನಡ ಭವನದ ಕೋಶಾಧಿಕಾರಿ ಸಂಧ್ಯಾರಾಣಿ ಟೀಚರ್, ಕಾರ್ಯದರ್ಶಿ ವಸಂತ್ ಕೆರೆಮನೆ ಮತ್ತಿತರರು ಉಪಸ್ಥಿತರಿದ್ದರು.