ಜ.24 ರಂದು ವಿಶೇಷ ರಾಷ್ಟ್ರೀಯ ಲೋಕ ಅದಾಲತ್
Monday, January 12, 2026
ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು ನ್ಯಾಯಾಲಯದ ಆವರಣದಲ್ಲಿ ಜ.24 ರಂದು ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವಿಶೇಷ ರಾಷ್ಟ್ರೀಯ ಲೋಕ ಅದಾಲತ್ತನ್ನು ಆಯೋಜಿಸಲಾಗಿದೆ.
ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಲು ಇದೊಂದು ಸುವರ್ಣ ಅವಕಾಶವಾಗಿದೆ. ಈ ಲೋಕ ಅದಾಲತ್‌ನ ಮೂಲಕ ಭೂಸ್ವಾಧೀನ ಪ್ರಕರಣಗಳು ಭೂಸ್ವಾಧೀನ ಪರಿಹಾರ ಬಾಕಿಯ ಜಾರಿ ಅರ್ಜಿ ಪ್ರಕರಣಗಳು ಇತ್ಯರ್ಥವಾದಲ್ಲಿ ಆದೇಶದ ವಿರುದ್ಧ ಮೇಲ್ಮನವಿ ಇರುವುದಿಲ್ಲ. ಈ ವಿಶೇಷ ರಾಷ್ಟ್ರೀಯ ಲೋಕ ಅದಾಲತ್‌ನ್ನು ಸದುಪಯೋಗ ಪಡೆದುಕೊಂಡು ತಮ್ಮ ಪರಿಹಾರ ಬಾಕಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.