ಜ.25 ರಂದು ಲಯನ್ಸ್ ಅಶೋಕ ಸೇವಾ ರತ್ನ ಪ್ರಶಸ್ತಿ ಪ್ರದಾನ

ಜ.25 ರಂದು ಲಯನ್ಸ್ ಅಶೋಕ ಸೇವಾ ರತ್ನ ಪ್ರಶಸ್ತಿ ಪ್ರದಾನ

ಮಂಗಳೂರು: ಲಯನ್ಸ್ ಕ್ಲಬ್ ಅಶೋಕನಗರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಲಯನ್ಸ್ ಕ್ಲಬ್ ಮಂಗಳೂರು ಅಶೋಕನಗರ ಸಹಯೋಗದೊಂದಿಗೆ ಸಮಾಜಸೇವೆಯ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಲಯನ್ಸ್ ಅಶೋಕ ಸೇವಾ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಲಯನ್ಸ್ ಕ್ಲಬ್ ಅಶೋಕನಗರ ಚಾರಿಟೇಬಲ್ ಟ್ರಸ್ಟ್ ಚೇರ್‌ಮನ್ ಡಾ. ನವೀನ್ ಶೆಟ್ಟಿ ಕೆ. ತಿಳಿಸಿದರು.

ಇದೇ ಮೊದಲ ಬಾರಿಗೆ ಪ್ರಶಸ್ತಿಯನ್ನು ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರಿಗೆ ನೀಡಲಾಗುವುದು. ಪ್ರಶಸ್ತಿ 25 ಸಾವಿರ ರೂ. ನಗದು ಒಳಗೊಂಡಿದೆ. ಜ.26ರಂದು ಸಂಜೆ 8ಕ್ಕೆ ಸರ್ಕ್ಯೂಟ್ ಹೌಸ್ ಬಳಿ ಇರುವ ಲಯನ್ಸ್ ಅಶೋಕ ಸೇವಾ ಭವನದಲ್ಲಿ ಪ್ರದಾನ ಮಾಡಲಾಗುವುದು. ಲಯನ್ಸ್ ಜಿಲ್ಲಾ ಗವರ್ನರ್ ಅರವಿಂದ್ ಶೆಣೈ ಪ್ರಶಸ್ತಿ ಪದಾನ ಮಾಡಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ಲಯನ್ಸ್ ಕ್ಲಬ್ ಅಶೋಕನಗರ ಚಾರಿಟೇಬಲ್ ಟ್ರಸ್ಟ್ ಮುಂದಿನ ವರ್ಷಗಳಲ್ಲಿಯೂ ಪ್ರತೀ ವರ್ಷ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಲಯನ್ಸ್ ಕ್ಲಬ್ ಅಶೋಕನಗರ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ವಸಂತ್ ಶೆಟ್ಟಿ, ಜತೆ ಕಾರ್ಯದರ್ಶಿ ನಾರಾಯಣ್ ಎಂ., ಲಯನ್ಸ್ ಕ್ಲಬ್ ಅಶೋಕ ನಗರ ಅಧ್ಯಕ್ಷ ಪ್ರಶಾಂತ್ ಬಿ. ಶೆಟ್ಟಿ, ಲಯನ್ಸ್ ಕ್ಲಬ್ ಪ್ರಾಂತ್ಯ-2 ಪ್ರಾಂತ್ಯಾಧ್ಯಕ್ಷ ಚರಣ್ ಆಳ್ವ, ಲಯನ್ಸ್ ಕ್ಲಬ್ ಅಶೋಕನಗರ ಖಜಾಂಚಿ ನಿಖಿಲ್ ಶೆಟ್ಟಿ, ಲಯನ್ಸ್ ವಲಯಾಧ್ಯಕ್ಷ ನರೇಶ್ ಶೆಟ್ಟಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article