ಜ.28-29 ರಂದು ಅಂತಾರಾಷ್ಟ್ರೀಯ ಸಮ್ಮೇಳನ
ಮಂಗಳೂರು: ನಗರದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಸ್ಕೂಲ್ ಆಫ್ ಆರ್ಟ್ಸ್ ಆಂಡ್ ಹ್ಯೂಮಾನಿಟಿಸ್ ವತಿಯಿಂದ ‘ಸುಸ್ಥಿರ ಅಭಿವೃದ್ಧಿಗಾಗಿ ಶಾಂತಿ ಮತ್ತು ಸಮಾವೇಶಿತ ಸಮಾಜಗಳ ಉತ್ತೇಜನ’ ಎಂಬ ವಿಷಯದ ಮೇಲೆ ಜ.28 ಮತ್ತು 29 ರಂದು ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ.
ಜ.28 ರಂದು ಬೆಳಗ್ಗೆ 10 ಗಂಟೆಗೆ ಎಲ್.ಎಫ್. ರಸ್ಕಿನ್ಹಾ ಸಭಾಂಗಣದಲ್ಲಿ ಉದ್ಘಾಟನೆ ನಡೆಯಲಿದೆ. ಜಿಲ್ಲಾಽಕಾರಿ ಎಚ್.ವಿ. ದರ್ಶನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂತ ಅಲೋಶಿಯಸ್ ವಿವಿ ಕುಲಾಧಿಪತಿ ರೆ. ಫಾ. ಡಯನೀಶಿಯಸ್ ವಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಮೆರಿಕದ ಯೂನಿವರ್ಸಿಟಿ ಆಫ್ ಮ್ಯಾಸಚೂಸೆಟ್ಸ್ ಆಮ್ರೆಸ್ಟ್ ಇದರ ಹಿರಿಯ ಸಂಶೋಧಕಿ ಡಾ. ಶಾಂತಿ ಎಂ. ಡಿಸೋಜ ದಿಕ್ಸೂಚಿ ಭಾಷಣವನ್ನು ಮಾಡುವರು ಎಂದು ಸಮ್ಮೇಳನದ ಅಧ್ಯಕ್ಷೆ ಡಾ. ರೋಸ್ ಮೀರ ಡಿಸೋಜ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮ್ಮೇಳನದಲ್ಲಿ ರಾಷ್ಟ ಮತ್ತು ಅಂತಾರಾಷ್ಟ್ರೀಯ ಮಟ್ಟದ ವಿದ್ವಾಂಸರು ವಿವಿಧ ವಿಷಯದ ಬಗ್ಗೆ ಮಾತನಾಡಲಿದ್ದಾರೆ. ಜ.29 ರಂದು ಮಧ್ಯಾಹ್ನ ೩ ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಎಸಿಪಿ ಗೀತಾ ಡಿ. ಕುಲಕರ್ಣಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ವಿವಿ ಸಹಕುಲಪತಿ ರೆ. ಡಾ. ಮೆಲ್ವಿನ್ ಡಿಕುನ್ಹಾ, ಸಂಚಾಲಕ ಆಲ್ವಿನ್ ಡಿಸೋಜ, ಸಂಘಟನಾ ಕಾರ್ಯದರ್ಶಿ ರೋಶನ್ ಮೊಂತೇರೊ, ಪಿಆರ್‌ಒ ಚಂದ್ರಕಲಾ, ಸಮ್ಮೇಳನದ ಸಂಯೋಜಕ ದೇವಿಶ್ರೀ ಶೆಟ್ಟಿ ಉಪಸ್ಥಿತರಿದ್ದರು.