29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಚಿಕ್ಕ ಹನುಮ ಸೆರೆ: ಆಂಧ್ರದಲ್ಲಿ ಬಂಧಿಸಿದ ಮಂಗಳೂರು ಪೊಲೀಸರು
ಈಗ ಆಂಧ್ರಪ್ರದೇಶ ಅನ್ನಮಯ್ಯ ಜಿಲ್ಲೆಯ ವಿಜಯನಗರ ಕಾಲೋನಿಯಲ್ಲಿ ವಾಸವಾಗಿರುವ ಚಿಕ್ಕ ಹನುಮನನ್ನು ಅನ್ನಮಯ್ಯ ಜಿಲ್ಲೆಯ, ಮದನಪಳ್ಳೆ ಎಂಬಲ್ಲಿ ಉರ್ವ ಠಾಣಾ ಪೊಲೀಸರು ಬಂಧಿಸಿ ವನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
1997ರ ಅ.11ರಂದು ಮಂಗಳೂರು ನಗರದ ಉರ್ವ ಮಾರಿಗುಡಿ ಕ್ರಾಸ್ ಬಳಿಯ ಅನ್ವರ್ ಮಹಲ್ ಎಂಬ ಮನೆಗೆ ನುಗ್ಗಿದ ದಂಡುಪಾಳ್ಯ ಗ್ಯಾಂಗ್‌ನ ಸಹಚರಗಳಾದ ದೊಡ್ಡ ಹನುಮ, ವೆಂಕಟೇಶ ಯಾನೆ ಚಂದ್ರ, ಮುನಿಕೃಷ್ಣ ಯಾನೆ ಕೃಷ್ಣ, ನಲ್ಲತಿಮ್ಮ ಯಾನೆ ತಿಮ್ಮ, ಕೃಷ್ಣ ಯಾನೆ ದಂಡುಪಾಳ್ಯ ಕೃಷ್ಣ ಯಾನೆ ನಾಗರಾಜ, ಚಿಕ್ಕ ಹನುಮ, ಕೃಷ್ಣಾಡು ಯಾನೆ ಕೃಷ್ಣ, ವೆಂಕಟೇಶ್ ಯಾನೆ ರಮೇಶ್ ಮನೆಯಲ್ಲಿದ್ದ ಲೂವಿಸ್ ಡಿಮೆಲ್ಲೋ (80) ಹಾಗೂ ರಂಜಿತ್ ವೇಗಸ್ (19) ಎಂಬಾತನನ್ನು ಕೊಲೆ ಮಾಡಿ ಚಿನ್ನಾಭರಣಗಳ್ನು ದೊಚಿದ್ದರು. ಪ್ರಕರಣದ ತನಿಖೆ ನಡೆಸಿ ದೋಷರೋಪಣಾ ಪಟ್ಟಿಯನ್ನು ಮಾನಾಯಾಲಯಕ್ಕೆ ಸಲ್ಲಿಸಿದಂತೆ W34 ನೇ ಅಪರ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಧೀಶರು (ವಿಶೇಷ ನ್ಯಾಯಾಲಯ), ಕೇಂದ್ರ ಕಾರಾಗೃಹ ಆವರಣ ಪರಪ್ಪನ ಅಗ್ರಹಾರ ಬೆಂಗಳೂರು ರವರ ಎಸ್.ಸಿ ನಂ. 728/2010 ರಂತೆ ನ್ಯಾಯಾಲಯದಲ್ಲಿ ವಿಚಾರಣೆ ಮುಕ್ತಾಯಗೊಂಡು ಇತರೆ ಐದು ಆಪಾದಿತರು ದೊಡ್ಡ ಹನುಮ ಯಾನೆ ಹನುಮ ಸೇರಿ ಘನ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತ್ತು.
ಈ ಪ್ರಕರಣದಲ್ಲಿ ಆಪಾಧಿತನಾದ ಚಿಕ್ಕ ಹನುಮತನ್ನ ಬುಧ್ಧಿವಂತಿಕೆಯನ್ನು ಬಳಸಿ ಚಿಕ್ಕ ಹನುಮಂತಪ್ಪ ಯಾನೆ ಕೆ. ಕೃಷ್ಣಪ್ಪ ಯಾನೆ ಕೃಷ್ಣ ಎಂದು ಹೆಸರು ಬದಲಾಯಿಸಿಕೊಂಡು ಬಂಧನಕ್ಕೆ ಸಿಗದೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಆಂದ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ. ಈತನ ಮೇಲೆ ಮಂಗಳೂರು JMFC 2ನೇ ನ್ಯಾಯಾಲಯವು 2010 ರಲ್ಲಿ LPC ವಾರೆಂಟ್ ಹೊರಡಿಸಿತ್ತು. ಈತನ ವಿರುದ್ಧ ಕರ್ನಾಟಕ ರಾಜ್ಯದಲ್ಲಿ ಸುಮಾರು 13 ಕೊಲೆ, ದರೋಡೆ ಪ್ರಕರಣಗಳು ದಾಖಲಾಗಿದೆ.
ಉರ್ವ ಪೊಲೀಸ್ ಠಾಣೆಯ ನಿರೀಕ್ಷಕ ಶ್ಯಾಮ್ ಸುಂಧರ್ ಹೆಚ್.ಎಮ್ , ಪಿಎಸ್‌ಐ ಗುರಪ್ಪ ಕಾಂತಿ, ಪಿಎಸ್‌ಐ ಎಲ್.ಮಂಜುಳಾ ಎಎಸ್‌ಐ ವಿನಯ ಕುಮಾರ್ ಮತ್ತು ಸಿಬ್ಬಂದಿಗಳಾದ ಲಲಿತಲಕ್ಷ್ಮಿ, ಅನಿಲ್, ಪ್ರಮೋದ್, ಆತ್ನಾನಂದ , ಹರೀಶ್ ಕಾರ್ಯಾಚರಣೆ ನಡೆಸಿದ್ದಾರೆ. ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಶಾಂಸೆಯನ್ನು ವ್ಯಕ್ತ ಪಡಿಸಿ, ಹೆಚ್ಚು ಬಹುಮಾನಕ್ಕಾಗಿ ಕರ್ನಾಟಕ ರಾಜ್ಯದ ಡಿಜಿ&ಐಜಿಪಿಗೆ ಶಿಫಾರಸ್ಸು ಮಾಡಿದ್ದಾರೆ.