ಜ.30 ರಿಂದ ಫೆ.1 ರವರೆಗೆ ಆಹಾರ ಮೇಳ
Friday, January 23, 2026
ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಆಹಾರ ಮೇಳವು ಜನವರಿ 30 ರಿಂದ ಫೆ.1 ರವರೆಗೆ ಮಂಗಳೂರು ನಗರದ ಕದ್ರಿ ಪಾರ್ಕ್‌ನಲ್ಲಿ ನಡೆಯಲಿದೆ.
ಆಹಾರ ಮೇಳದಲ್ಲಿ ಕರಾವಳಿ ಪ್ರದೇಶದ ವೈವಿಧ್ಯಮಯ ಹಾಗೂ ಸಮೃದ್ಧ ಪಾಕ ಪರಂಪರೆಯನ್ನು ಪ್ರೋತ್ಸಾಹಿಸುವ ಉದ್ದೇಶ ಹೊಂದಿದ್ದು, ಸ್ಥಳೀಯ ಹಾಗೂ ಸಾಂಪ್ರದಾಯಿಕ ಆಹಾರ ಪದಾರ್ಥಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವೇದಿಕೆ ಕಲ್ಪಿಸಲಿದೆ. ಆಹಾರ ಪ್ರಿಯ ನಾಗರಿಕರಿಗೆ ವಿಶೇಷ ಅನುಭವವನ್ನು ನೀಡುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಉತ್ಸವದಲ್ಲಿ ಎಲ್ಲ ವರ್ಗದ ಜನರಿಗೆ ರುಚಿಕರ ಹಾಗೂ ವೈವಿಧ್ಯಮಯ ತಿನಿಸುಗಳು ಲಭ್ಯವಿರಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 9449035570, 9243388835 ಸಂಪರ್ಕಿಸಬಹುದು ಎಂದು ಸ್ಟ್ರೀಟ್ ಫುಡ್ ಫೆಸ್ಟಿವಲ್ ಸಮಿತಿ ಅಧ್ಯಕ್ಷರು ಹಾಗೂ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರ ಪ್ರಕಟನೆ ತಿಳಿಸಿದೆ.