ಜ.30 ರಿಂದ ಕದ್ರಿ ಪಾರ್ಕ್‌ನಲ್ಲಿ ‘ಸ್ಟ್ರೀಟ್‌ಫುಡ್ ಫೆಸ್ಟಿವಲ್’

ಜ.30 ರಿಂದ ಕದ್ರಿ ಪಾರ್ಕ್‌ನಲ್ಲಿ ‘ಸ್ಟ್ರೀಟ್‌ಫುಡ್ ಫೆಸ್ಟಿವಲ್’

ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಆಹಾರ ಮೇಳವು ಜ.30 ರಿಂದ ಫೆ.1 ರವರೆಗೆ ಮಂಗಳೂರು ನಗರದ ಕದ್ರಿ ಪಾರ್ಕ್‌ನಲ್ಲಿ ನಡೆಯಲಿದೆ.

ಈ ಆಹಾರ ಮೇಳದಲ್ಲಿ ಕರಾವಳಿ ಪ್ರದೇಶದ ವೈವಿಧ್ಯಮಯ ಹಾಗೂ ಸಮೃದ್ಧ ಪಾಕ ಪರಂಪರೆಯನ್ನು ಪ್ರೋತ್ಸಾಹಿಸುವ ಉದ್ದೇಶ ಹೊಂದಿದ್ದು, ಸ್ಥಳೀಯ ಹಾಗೂ ಸಾಂಪ್ರದಾಯಿಕ ಆಹಾರ ಪದಾರ್ಥಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವೇದಿಕೆ ಕಲ್ಪಿಸಲಿದೆ. ಆಹಾರ ಪ್ರಿಯ ನಾಗರಿಕರಿಗೆ ವಿಶೇಷ ಅನುಭವವನ್ನು ನೀಡುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಉತ್ಸವದಲ್ಲಿ ಎಲ್ಲ ವರ್ಗದ ಜನರಿಗೆ ರುಚಿಕರ ಹಾಗೂ ವೈವಿಧ್ಯಮಯ ತಿನಿಸುಗಳು ಲಭ್ಯವಿರಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 9449035570, 9243388835 ಸಂಪರ್ಕಿಸಬಹುದು ಎಂದು ಸ್ಟ್ರೀಟ್ ಫುಡ್ ಫೆಸ್ಟಿವಲ್ ಸಮಿತಿ ಅಧ್ಯಕ್ಷರು ಹಾಗೂ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article