ಜ.4 ರಂದು ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ
ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು. ಎಚ್., ಬೆಳಿಗ್ಗೆ 9.30ಕ್ಕೆ ಗುರುಪುರ ಕೈಕಂಬದ ಸಬೀಲುಲ್ ಹುದಾ ಅಲ್ಬಿರ್ರ್ ಶಾಲಾ ವಠಾರದಿಂದ ಸಭಾಂಗಣದ ತನಕ ನಡೆಯಲಿರುವ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಹಾಜಿ ಎಂ. ಹೆಚ್. ಮೊಹಿದಿನ್ ಅಡ್ಡೂರು ಉದ್ಘಾಟಿಸಲಿದ್ದು, ಬೆಳಿಗ್ಗೆ 10ಕ್ಕೆ ಉಮರ್ ಯು.ಎಚ್. ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬೆಳಿಗ್ಗೆ 10.15ಕ್ಕೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸಮ್ಮೇಳನ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು ಸಮ್ಮೇಳನಾಧ್ಯಕ್ಷರ ಭಾಷಣ ಮಾಡಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಹಾಗೂ ಮತ್ತಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಅಧ್ಯಕ್ಷತೆ ವಹಿಸಲಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಶಮೀಮಾ ಕುತ್ತಾರ್ ಅವರ ‘ಪಡಿಞ್ಞಾರ್ರೊ ಪೂ’ (ಕಥಾ ಸಂಕಲನ), ಹಸೀನ ಮಲ್ನಾಡ್ ಅವರ ‘ಮಿನ್ನಾಂಪುಲು’ (ಹನಿಗವನ ಸಂಕಲನ), ಎನ್.ಎಂ. ಹನೀಫ್ ನಂದರಬೆಟ್ಟು ಅವರ ‘ಸಂಪುಕಾತ್’ (ಕವನ ಸಂಕಲನ), ಬಶೀರ್ ಅಹ್ಮದ್ ಬೆಳ್ಳಾಯಿರು ಅವರ ‘ಬೆಲ್ಚ’ (ಕವನ ಸಂಕಲನ) ಮತ್ತು ಹೈದರಲಿ ಕಾಟಿಪಳ್ಳ ಅವರ ‘ನಸೀಅತ್’ (ಕವನ ಸಂಕಲನ) ಬ್ಯಾರಿ ಕೃತಿಗಳು ಬಿಡುಗಡೆಗೆಯಾಗಲಿವೆ.
ಮಧ್ಯಾಹ್ನ 12ಕ್ಕೆ ಸಮ್ಮೇಳನಾಧ್ಯಕ್ಷರ ಭಾಷಣದ ಮೇಲೆ ನಡೆಯಲಿರುವ ಚರ್ಚಾಗೋಷ್ಠಿಯಲ್ಲಿ ಪ್ರಾಧ್ಯಾಪಕ ಹೈದರ್ ಅಲಿ, ಪತ್ರಕರ್ತ ಏ.ಕೆ. ಕುಕ್ಕಿಲ, ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯೆ ಹಫ್ಸಾ ಬಾನು ಭಾಗವಹಿಸ ಲಿದ್ದಾರೆ. ಮಂಗಳೂರು ವಿ.ವಿ. ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್ ಸಿದ್ದೀಕ್ ಚರ್ಚಾಗೋಷ್ಠಿ ನಿರೂಪಿಸಲಿದ್ದಾರೆ. ಮಧ್ಯಾಹ್ನ 2ಕ್ಕೆ ಹಿರಿಯ ಸಾಹಿತಿ ಮುಹಮ್ಮದ್ ಬಡ್ಡೂರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬ್ಯಾರಿ ಕವಿಗೋಷ್ಠಿಯಲ್ಲಿ ಬದ್ರುದ್ದೀನ್ ಕೂಳೂರು, ಖಲಂದರ್ ಬೀವಿ ಅಮಾನುಲ್ಲಾ, ಅಶ್ಫಾಕ್ ಅಹ್ಮದ್ ಕಾಟಿಪಳ್ಳ, ಶಾಹಿದಾ ಮಂಗಳೂರು, ಶಮೀಮ್ ಕುಟ್ಟಿಕಳ, ಅಸ್ಮತ್ ವಗ್ಗ, ನಾಫಿಲ ಶಬೀನ್ ಕೈಕಂಬ ಮತ್ತು ಮುಹಮ್ಮದ್ ಕುಂಞಿ ಮಾಸ್ಟರ್ ಅಡ್ಡೂರು ಕವನ ಮಂಡಿಸಲಿದ್ದಾರೆ. ಮಧ್ಯಾಹ್ನ 3ಕ್ಕೆ ಮೂಡಬಿದರೆಯ ಆಳ್ವಾಸ್ ಕಾಲೇಜಿನ ದಫ್ ತಂಡದಿಂದ ದಫ್ ಹಾಡು ಮತ್ತು ಬ್ಯಾರಿ ಹಾಡುಗಾರರ ತಂಡದಿಂದ ಹಾಡುಗಳ ಸಂಭ್ರಮವಿರಲಿದೆ.
ಸಂಜೆ 4ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿಅಬ್ದುಲ್ ಲತೀಫ್ ಗುರುಪುರ, ಪಾತುಞ್ಞಿ ಮೂಡುಶೆಡ್ಡೆ, ಎಂ.ಪಿ. ಉಸ್ಮಾನ್ ಮುಕ್ರಿಕ ಸೂರಲ್ಪಾಡಿ, ಸುಲೈಮಾನ್ ಗುರುಪುರ, ಸಲೀಕಾ ಸೂರಲ್ಪಾಡಿ, ಆರ್. ಎಸ್. ಅಶ್ರಫ್ ಸೂರಲ್ಪಾಡಿ, ಅಬ್ದುಲ್ ಶರೀಫ್ ಸಾಮರಸ್ಯ ನ್ಯೂಸ್ ಮತ್ತು ಮುಹಮ್ಮದ್ ನಝೀರ್ ಬಜ್ಪೆ ಸನ್ಮಾನ ಸ್ವೀಕರಿಸಲಿದ್ದಾರೆ.
ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಡಾ. ಇ.ಕೆ.ಎ. ಸಿದ್ದೀಕ್ ಅಡ್ಡೂರು, ಸದಸ್ಯ ಸಂಚಾಲಕ ತಾಜುದ್ದೀನ್ ಅಮ್ಮುಂಜೆ, ಅಕಾಡೆಮಿ ಸದಸ್ಯರಾದ ಯು. ಹೆಚ್. ಖಾಲಿದ್ ಉಜಿರೆ, ಅನ್ಸಾರ್ ಕಾಟಿಪಳ್ಳ, ಸ್ವಾಗತ ಸಮಿತಿಯ ಎಂ.ಜಿ. ಸಾಹುಲ್ ಹಮೀದ್ ಗುರುಪುರ, ಸಲೀಂ ಹಂಡೇಲ್, ಅಬ್ದುಲ್ ಜಲೀಲ್ ಅರಳ, ಎಂ.ಡಿ. ನವಾಝ್ ಉಪಸ್ಥಿತರಿದ್ದರು.