ಕನಾ೯ಟಕ ಪಬ್ಲಿಕ್ ಸ್ಕೂಲ್ ಮಿಜಾರಿನಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ
Monday, January 26, 2026
ಮೂಡುಬಿದಿರೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಮಿಜಾರು ಇದರ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಶಾಲಾ ಪ್ರಾಂಶುಪಾಲ ಚಂದ್ರು ಅವರು ಧ್ವಜರೋಹಣ ನೆರವೇರಿಸಿ, ಗಣರಾಜ್ಯೋತ್ಸವ ದಿನಾಚರಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಪುಷ್ಪ, ಸಂಸ್ಥೆಯ ಎಲ್ಲಾ ಉಪನ್ಯಾಸಕರು ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ದೇಶ ಭಕ್ತಿಗೆ ಪೂರಕವಾದ ಭಾಷಣಗಳು ಮತ್ತು ದೇಶಭಕ್ತಿ ಗೀತೆಯನ್ನು ಹಾಡಿದರು.
ಪ್ರೌಢಶಾಲಾ ಮುಖ್ಯಸ್ಥರಾದ ಪುಷ್ಪ ಸ್ವಾಗತಿಸಿದರು. ಉಪನ್ಯಾಸಕರಾದ ವಿನ್ಸೆಂಟ್ ಡಿಸೋಜ ಅವರು ವಂದಿಸಿದರು.