ಗಣರಾಜ್ಯೋತ್ಸವ: ಅಗತ್ಯ ಸಿದ್ಧತೆ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ

ಗಣರಾಜ್ಯೋತ್ಸವ: ಅಗತ್ಯ ಸಿದ್ಧತೆ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ


ಮಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ನಗರದ ನೆಹರೂ ಮೈದಾನದಲ್ಲಿ ಜ.26 ರಂದು ನಡೆಯುವ ಗಣರಾಜ್ಯೋತ್ಸವ ವಿಜೃಂಭಣೆಯಿಂದ ನಡೆಯಲು ಅಗತ್ಯ ಸಿದ್ಧತೆ ನಡೆಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ. ಸೂಚಿಸಿದರು.

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಧ್ವಜಾರೋಹಣ ಸ್ಥಳ ನಿಗದಿ ಮಾಡಬೇಕು. ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದು, ಸಮಾವೇಶ, ಪರೇಡ್ ವೀಕ್ಷಣೆ, ಸಚಿವರಿಂದ ಗಣರಾಜ್ಯೋತ್ಸವ ಸಂದೇಶ, ಪಥ ಸಂಚಲನ, ಪ್ರಶಸ್ತಿ ವಿಸ್ತರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ವ್ಯವಸ್ಥಿತವಾಗಿ ಗಣರಾಜ್ಯೋತ್ಸವ ಆಚರಿಸಲು ಅಗತ್ಯ ಸಿದ್ದತೆಗೆ ಮಾಡಿಕೊಳ್ಳಬೇಕು ಎಂದು ಅವರು ಸೂಚಿಸಿದರು.

ಎಲ್ಲಾ ಇಲಾಖೆಯ ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯಾಯಾ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಅವರು ಹೇಳಿದರು.

ಕುಡಿಯುವ ನೀರಿನ ವ್ಯವಸ್ಥೆ, ತುರ್ತು ಚಿಕಿತ್ಸೆ ಆಂಬುಲೆನ್ಸ್ ನಿಯೋಜನೆ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.

ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಹೆಚ್ಚುವರಿ ಪೊಲೀಸ್ ಆಧೀಕ್ಷಕ ಅನಿಲ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article