ಕಲೆಯ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಅಭಿರುಚಿ ಶ್ಲಾಘನೀಯ: ರಾಜೇಶ್ ಶೆಟ್ಟಿ

ಕಲೆಯ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಅಭಿರುಚಿ ಶ್ಲಾಘನೀಯ: ರಾಜೇಶ್ ಶೆಟ್ಟಿ


ಮಂಗಳೂರು: ವಿವಿಧ ಕಲಾ ಪ್ರಕಾರಗಳ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಭಾಷೆಯ ಬಗ್ಗೆ ಅಭಿರುಚಿ ಅಭಿಮಾನ ಮೂಡಿಸುವ ಕಾರ್ಯ ಶ್ಲಾಘನೀಯ ಎಂದು ಕೆ.ಎಸ್.ಆರ್.ಟಿ.ಸಿ. ಮಂಗಳೂರು ವಿಭಾಗೀಯ ನಿಯಂತ್ರಾಣಾಧಿಕಾರಿ ರಾಜೇಶ್ ಶೆಟ್ಟಿ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಂಗಳೂರಿನ ತುಳುಭವನದಲ್ಲಿ ಹಮ್ಮಿಕೊಂಡ ‘ಜೋಕ್ಲೆ ಕಲಾ ಚಾತುರ್ಪು’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಶಾಲಾ ಕಾಲೇಜು ಹಂತದಲ್ಲಿ ವಿವಿಧ ತುಳು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ತುಳು ಭಾಷೆ ಹಾಗೂ ತುಳುನಾಡಿನ ಸಂಸ್ಕೃತಿ ಬಗ್ಗೆ ವಿಚಾರಗಳನ್ನು ಯುವ ಜನತೆಗೆ ತಿಳಿಸಿಕೊಡಲು ಸಾಧ್ಯ, ಈ ನಿಟ್ಟಿನಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಕೆಲಸ ಅಭಿನಂದನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ವಹಿಸಿದ್ದರು.

ಸಮಾರಂಭದಲ್ಲಿ ನಿವೃತ್ತ ಉಪನ್ಯಾಸಕ ಪ್ರೊ. ಅಕ್ಷಯ ಕುಮಾರ್, ಸರಕಾರಿ ವೆನ್ಲಾಕ್ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಪದ್ಮನಾಭ ಅಮೀನ್, ಲಯನ್ಸ್ ಜಿಲ್ಲಾ ಸಂಯೋಜಕಿ ಆಶಾ ನಾಗರಾಜ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ವಿದ್ಯಾರ್ಥಿಗಳಿಗಾಗಿ ತುಳು ಭಾಷಣ, ತುಳು ಜನಪದ ಕತೆ ಹೇಳುವುದು, ತುಳು ಭಾವಗೀತೆ, ತುಳು ಜನಪದ ನೃತ್ಯ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. 

ಅಕಾಡೆಮಿಯ ಸದಸ್ಯೆ ಅಕ್ಷಯ ಆರ್. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ಸದಸ್ಯ ಬೂಬ ಪುಜಾರಿ ಮಳಲಿ ಸ್ವಾಗತಿಸಿ, ಸದಸ್ಯ ಪಾಂಗಾಳ ಬಾಬು ಕೊರಗ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article