ಬಜೆಟ್ ಸಾರ್ವಜನಿಕ ಸಮಾಲೋಚನೆ
Saturday, January 3, 2026
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ 2026-27 ನೇ ಸಾಲಿನ ಬಜೆಟ್ ತಯಾರಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಎರಡನೇ ಸುತ್ತಿನ ಸಾರ್ವಜನಿಕ ಸಭೆಯನ್ನು ಜ.7 ರಂದು ಮಧ್ಯಾಹ್ನ 3.30ಕ್ಕೆ ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಕಚೇರಿಯಲ್ಲಿ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ.
ಸಭೆಯಲ್ಲಿ 2026-27 ನೇ ಸಾಲಿನ ಪಾಲಿಕೆಯ ಬಜೆಟ್ ತಯಾರಿಕೆಗೆ ಸಾರ್ವಜನಿಕ ಸಲಹೆ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತದೆ. ಈ ಸಭೆಗೆ ನೋಂದಾಯಿತ ವಸತಿ ಕ್ಷೇಮಾಭಿವೃದ್ದಿ ಸಂಘಗಳು, ನೋಂದಾಯಿತ ಸರಕಾರೇತರ ಸಂಘ ಸಂಸ್ಥೆಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.