ಭಾರೀ ಗಾಳಿ: ಮೀನುಗಾರರು ಮುನ್ನೆಚ್ಚರಿಕೆ ವಹಿಸಲು ಸೂಚನೆ
Tuesday, January 27, 2026
ಮಂಗಳೂರು: ಹವಾಮಾನ ಮುನ್ಸೂಚನೆಯಂತೆ ಜ.27 ರಿಂದ 31 ರವರೆಗೆ ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ ಬೀಸುವುದರಿಂದ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಎಲ್ಲಾ ಮೀನುಗಾರರು ಜಾಗರೂಕತೆ ವಹಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.