ಕುದ್ಮುಲ್ ರಂಗರಾವ್ ಅವರ ಸಮಾಧಿಗೆ ಬಜೆಪಿ ಎಸ್‌ಸಿ ಮೋರ್ಚಾದಿಂದ ಪುಷ್ಪ ನಮನ
Friday, January 30, 2026
ಮಂಗಳೂರು: ದಲಿತೋದ್ಧಾರಕ, ಸಾಮಾಜಿಕ ಸುಧಾರಣೆಯ ಹರಿಕಾರ ಕುದ್ಮುಲ್ ರಂಗರಾವ್ ಅವರ ಪುಣ್ಯಸ್ಮರಣೆಯ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಎಸ್‌ಸಿ ಮೋರ್ಚಾ ವತಿಯಿಂದ ಬಾಬುಗುಡ್ಡೆಯಲ್ಲಿರುವ ಅವರ ಸಮಾಧಿಗೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ದಕ್ಷಿಣ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಹಿರಿಯ ನಾಯಕ ಮೋನಪ್ಪ ಭಂಡಾರಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮಂಡಲದ ಯುವ ಮೋರ್ಚಾ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ನಿಕಟ ಪೂರ್ವ ಕಾರ್ಪೊರೇಟರ್‌ಗಳಾದ ಭರತ್ ಕುಮಾರ್, ವೀಣಾ ಮಂಗಳ, ಸಂದೀಪ್ ಗರೋಡಿ, ಪಶ್ಚಿಮ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಮೋಹನ್ ಪೂಜಾರಿ, ದಕ್ಷಿಣ ಮಂಡಲದ ಕಾರ್ಯದರ್ಶಿ ರಘುವೀರ್ ಬಾಬುಗುಡ್ಡೆ, ಪ್ರಮುಖರಾದ ಅಮಿತ್ ರಾಜ್, ಜಯಕುಮಾರ್, ಸುರೇಖಾ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
