ನಾಳೆ ಡಿಸಿ ನೇರ ಫೋನ್ ಇನ್
Tuesday, January 27, 2026
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಆಡಳಿತಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳು ಜ.28 ರಂದು ಬೆಳಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.
ಸಾರ್ವಜನಿಕರು ದೂರವಾಣಿ ಸಂಖ್ಯೆ 0824-2220301 ಮತ್ತು 0824-2220318 ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.