ಡಾ. ಎನ್.ವಿನಯ ಹೆಗ್ಡೆ ನಿಧನಕ್ಕೆ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸಂತಾಪ

ಡಾ. ಎನ್.ವಿನಯ ಹೆಗ್ಡೆ ನಿಧನಕ್ಕೆ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸಂತಾಪ

ಮಂಗಳೂರು: ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್. ವಿನಯ ಹೆಗ್ಡೆ ಅವರ ನಿಧನಕ್ಕೆ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀಡಿದ ಡಾ. ಎನ್. ವಿನಯ್ ಹೆಗ್ಡೆ ಅವರು ಗ್ರಾಮೀಣ ಪ್ರದೇಶವಾಗಿದ್ದ ನಿಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಶಿಕ್ಷಣ ತಜ್ಞರಾಗಿದ್ದಾರೆ. ನಿಟ್ಟೆ ಯೂನಿವರ್ಸಿಟಿ ರೂವಾರಿಯಾಗಿದ್ದ ಅವರು ದಕ್ಷ ಆಡಳಿತಗಾರರಾಗಿದ್ದು, ಆತ್ಮೀಯರಾಗಿದ್ದವರು. ಅವರ ನಿಧನ ಅತೀವ ದುಃಖವನ್ನು ತಂದಿದೆ ಎಂದು ರಾಜೇಂದ್ರ ಕುಮಾರ್ ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article