ಯುವ ಜನರೇ ದೇಶದ ಆಸ್ತಿ: ಯು.ಟಿ. ಖಾದರ್

ಯುವ ಜನರೇ ದೇಶದ ಆಸ್ತಿ: ಯು.ಟಿ. ಖಾದರ್

ಮಂಗಳೂರಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ 


ಮಂಗಳೂರು: ಸುಶಿಕ್ಷಿತ ಮತ್ತು ಸುಸಂಸ್ಕೃತ ಯುವ ಜನರೇ ನಮ್ಮ ದೇಶದ ಬಹುದೊಡ್ಡ ಆಸ್ತಿ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ಅವರು ಪುರಭವನದಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಯುವನಿಕ, ಮಂಗಳೂರು ವಿವಿ ಎನ್‌ಎಸ್‌ಎಸ್, ಮತ್ತು ಹೆಲ್ತ್ ವಾಲಂಟೀರ್ಸ್ ಸಹಯೋಗದಲ್ಲಿ ಜಂಟಿಯಾಗಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಯೋಜಿಸಿದ್ದರು.


ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ನಿರ್ದೇಶಕ ಫಾ. ವಿಲ್ಫ್ರೆಡ್ ಪ್ರಕಾಶ್ ಡಿಸೋಜ, ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕರ್ನಾಟಕ ರಾಜ್ಯ ಗಾಣಿಗ ಅಭಿವೃದ್ಧಿ ಮಂಡಳಿ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಮಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ರಘುರಾಜ್ ಕದ್ರಿ, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ ಶಾಲೆಟ್ ಪಿಂಟೊ, ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜಕ ಡಾ. ಶೇಷಪ್ಪ ಅಮೀನ್, ಹಿರಿಯ ವಕೀಲ ದಿನಕರ ಶೆಟ್ಟಿ, ಶ್ರೀನಿವಾಸ್ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಕಾಮರ್ಸ್ ಆಂಡ್ ಇನ್ಸ್ಟಿಟ್ಯೂಟ್ ಆಫ್ ಪೋರ್ಟ್ ಶಿಪ್ಪಿಂಗ್ ಮತ್ತು ಲಾಜಿಸ್ಟಿಕ್ಸ್ ಮ್ಯಾನೇಜ್ಮೆಂಟ್ ಡೀನ್ ಡಾ. ವೆಂಕಟೇಶ್ ಅಮೀನ್, ಕರಾವಳಿ ಸಂಸ್ಥೆ ಉಡುಪಿ ಪ್ರಾಂಶುಪಾಲ ಎಂ. ಜೈಕಿಶನ್ ಭಟ್ ಉಪಸ್ಥಿತರಿದ್ದರು.

ಯುವನಿಕ ಸಂಯೋಜಕ ರಘುವೀರ್ ಸೂಟರಪೇಟೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೈಶಾಲಿ ಮತ್ತು ನಿಹಾಲ್ ಕಾರ್ಯಕ್ರಮ ನಿರ್ವಹಿಸಿದರು. ಯುವನಿಕ ನಿರ್ದೇಶಕ ಕೆ. ಕಸ್ತೂರಿ, ಸ್ವಯಂ ಸೇವಕರಾದ ಹಿತೇಶ್, ಸುಹಾನಿ, ಪವನ್, ಸತೋಷ ಯಾದವ್, ಸಂಜನಾ, ದೀಕ್ಷಿತ್ ನಾಯಕ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article