ಧರ್ಮಸ್ಥಳ ಪ್ರಕರಣ: ತಿಮರೋಡಿ, ಜಯಂತ್ ಪರ ದೊರೆ ರಾಜು ವಾದ ಮಂಡನೆ
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೈಕೋರ್ಟ್‌ನ ಹಿರಿಯ ನ್ಯಾಯವಾದಿ ದೊರೆ ರಾಜು ಶನಿವಾರ ಹಾಜರಾಗಿದ್ದಾರೆ.
ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ 39/25 ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ಅವರು ವಾದ ಮಂಡಿಸಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್.ಐ.ಟಿ. ವರದಿ ಸಲ್ಲಿಸಿದ್ದು, ಅದರಲ್ಲಿ ಸೌಜನ್ಯಾ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿರೋಡಿ ಹಾಗೂ ಇತರರನ್ನು ಆರೋಪಿಗಳಾಗಿಸಲು ಅನುಮತಿ ನೀಡುವಂತೆ ಕೇಳಿಕೊಂಡಿದೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ.
ಈ ಪ್ರಕರಣದಲ್ಲಿ ಜಯಂತ್ ಟಿ., ಮಹೇಶ್ ಶೆಟ್ಟಿ ಹಾಗೂ ಇತರ ಹೋರಾಟಗಾರರ ಪರವಾಗಿ ಹಿರಿಯ ನ್ಯಾಯವಾದಿ ದೊರೆ ರಾಜು ವಾದ ಮಂಡಿಸುತ್ತಿದ್ದಾರೆ.
ಈ ಹಿಂದೆ ಎಸ್.ಐ.ಟಿ. ಸಲ್ಲಿಸಿದ್ದ ವರದಿಯ ಪ್ರತಿಯನ್ನು ಪಡೆಯಲು ಜಯಂತ್ ಟಿ. ಅವರ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ವಾದ ಮಂಡಿಸಿದ್ದ ದೊರೆ ರಾಜು ಆ ವರದಿಯ ಪ್ರತಿಯನ್ನು ಪಡೆದಿದ್ದರು. ಇದೀಗ ಆ ವರದಿಯ ಆಧಾರದಲ್ಲಿ ಅವರು ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದಾರೆ ಎನ್ನಲಾಗುತ್ತಿದೆ.