ಕರಾವಳಿಗೆ ಕೇಂದ್ರ ಯೋಜನೆಗಳನ್ನು ಆಕರ್ಷಿಸುವ ಕುರಿತು ಸಭೆ
Thursday, January 8, 2026
ಮಂಗಳೂರು: ಕರಾವಳಿ ಕರ್ನಾಟಕಕ್ಕೆ ಸಾಗರಮಾಲಾ (Sagarmala) ಯೋಜನೆ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ತರಲು ಇರುವ ಅವಕಾಶಗಳು, ಸಾಧ್ಯತೆಗಳು ಹಾಗೂ ಸಂಯೋಜಿತ ಕಾರ್ಯತಂತ್ರಗಳ ಕುರಿತು, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಭೆಯನ್ನು ಆಯೋಜಿಸಲಾಗಿತ್ತು.
ಸಭೆಯಲ್ಲಿ ಕರಾವಳಿ ನಿಯಂತ್ರಣ ವಲಯ (CRZ), ಕರ್ನಾಟಕ ಮೆರಿಟೈಮ್ ಬೋರ್ಡ್, ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ (ಏಈಆಅ) ಹಾಗೂ ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿ, ತಮ್ಮ ತಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿನ ಮಾಹಿತಿಯನ್ನು ಮಂಡಿಸಿದರು.
ಎಲ್ಲಾ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅಧ್ಯಕ್ಷರು ಮಾತನಾಡಿ, ಮುಂದಿನ ದಿನಗಳಲ್ಲಿ ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ಕರಾವಳಿ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಪ್ರದೀಪ್ ಡಿ’ಸೋಜಾ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಮಂಜುನಾಥ್ ಆರ್. ಶೆಟ್ಟಿ ಹಾಗೂ ಮಂಡಳಿಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.