ಸ್ವಾಮಿ ವಿವೇಕಾನಂದರು ಯುವಕರ ನಿಜವಾದ ಸಾಮರ್ಥ್ಯವನ್ನು ಗುರುತಿಸಿದರು: ಪಿ. ಪ್ರದೀಪ್ ಕುಮಾರ್
ಮಂಗಳೂರು ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಮಂಗಳೂರು ರಾಮಕೃಷ್ಣ ಮಿಷನ್‌ನ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ನಡೆದ ರಾಷ್ಟ್ರಿಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾಮೀಜಿ ಯುವಕರ ನಿಜವಾದ ಸಾಮರ್ಥ್ಯವನ್ನು ಗುರುತಿಸಿದರು ಮತ್ತು ರಾಷ್ಟ್ರವನ್ನು ಪರಿವರ್ತಿಸಲು ಈ ಸಾಮರ್ಥ್ಯವನ್ನು ಬಳಸಿಕೊಳ್ಳುವಲ್ಲಿ ಯಾವಾಗಲೂ ಒತ್ತಾಯಿಸಿದರು. ವ್ಯಕ್ತಿತ್ವವನ್ನು ನಿರ್ಮಿಸುವ ಶಿಕ್ಷಣ ಮುಖ್ಯ. ಭೂಮಿಯ ಬಗ್ಗೆ ಕಲಿಯುವುದು ಜೀವನದಲ್ಲಿ ಎಂದಿಗೂ ನಿಲ್ಲುವುದಿಲ್ಲ. ಪ್ರತಿಯೊಬ್ಬರೂ ನೆಲದ ಕಾನೂನನ್ನು ಗೌರವಿಸಿ. ನೈತಿಕತೆ, ಮಾನವೀಯತೆ ಮತ್ತು ಮೌಲ್ಯಗಳನ್ನು ಎಂದಿಗೂ ಬಿಡಬಾರದು ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಂಗಳೂರು ಕೆನರಾ ಹೈಸ್ಕೂಲ್ ಅಸೋಸಿಯೇಷನ್‌ನ ಗೌರವ ಕಾರ್ಯದರ್ಶಿ ಎಂ. ರಂಗನಾಥ ಭಟ್ ಅವರು ಮಾತನಾಡಿ, ಬಾಲ್ಯದಿಂದಲೇ ಸ್ವಾಮಿ ವಿವೇಕಾನಂದರ ಚಿಂತನೆಗಳು ನನ್ನ ಮೇಲೆ ಹಲವು ರೀತಿಯಲ್ಲಿ ಪ್ರಭಾವ ಬೀರಿದೆ. ಸ್ವಾಮಿ ವಿವೇಕಾನಂದರ ಮಾತುಗಳು ನನ್ನ ಜೀವನದುದ್ದಕಕ್ಕೂ ನೆರಳಿನಂತೆ ಸ್ಪೂರ್ತಿ ತುಂಬಿವೆ. ಸ್ವಾಮಿ ವಿವೇಕಾನಂದರ ಬಗ್ಗೆ ಅರಿತುಕೊಂಡಾಗ ಸುಭೀಕ್ಷ ಜೀವನ ನಮ್ಮದಾಗುತ್ತದೆ ಎಂದು ಹೇಳಿದರು.
ಉತ್ತರಾಖಂಡದ ಮಾಯಾವತಿಯ ಅದ್ವೈತ ಆಶ್ರಮದ ಪ್ರಬುದ್ಧ ಭಾರತ ಮಾಸಪತ್ರಿಕೆಯ ಸಹ ಸಂಪಾದಕರಾದ ಸ್ವಾಮಿ ಜ್ಞಾನೀಶಾನಂದಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಮಂಗಳೂರು ರಾಮಕೃಷ್ಣ ಮಿಷನ್‌ನ ಕಾರ್ಯದರ್ಶಿ ಸ್ವಾಮಿ ಜಿತಕಾಮಾನಂದಜಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೆಂಗಳೂರಿನ ಲೇಖಕ ಹಾಗೂ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಉಪಸ್ಥಿತರಿದ್ದರು.